ADVERTISEMENT

ವಿದುರಾಶ್ವತ್ಥದ ಹೋರಾಟ ಐತಿಹಾಸಿಕವಾದುದು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2021, 8:50 IST
Last Updated 12 ಮಾರ್ಚ್ 2021, 8:50 IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ   

ಚಿಕ್ಕಬಳ್ಳಾಪುರ: ದೇಶದ ಇತಿಹಾಸದಲ್ಲಿ ಅನೇಕ ಹೋರಾಟದ ಸ್ಮರಣೆ ಮಾಡುವ ಸಂದರ್ಭ ಇದು. ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟವನ್ನು ಇಂದಿಗೂ ವಿಶ್ವ ಅಚ್ಚರಿಯಿಂದ ಕಾಣುತ್ತಿದೆ ಎಂದು‌‌ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಅಮೃತ ಮಹೋತ್ಸವದಲ್ಲಿ ಮಾತನಾಡಿದ ಅವರು, ಕಿತ್ತೂರು, ಸುರಪುರ, ಈಸೂರು, ವಿದುರಾಶ್ವತ್ಥ ಹೋರಾಟಗಳು ದೇಶದಲ್ಲಿ ಮಹತ್ವವಾದವು ಎಂದು ಸ್ಮರಿಸಿದರು.

ವಿದುರಾಶ್ವತ್ಥದ ಹೋರಾಟ ಐತಿಹಾಸಿಕವಾದುದು. ಈ ಸ್ಥಳ ಧಾರ್ಮಿಕ ಕೇಂದ್ರವೂ ಆಗಿದೆ. ಈ ಸಣ್ಣ ಹಳ್ಳಿಯಲ್ಲಿ ನಡೆದ ಹೋರಾಟ ದೇಶದ ಇತಿಹಾಸದಲ್ಲಿ ದಾಖಲಾಗಿದೆ ಎಂದು ಹೇಳಿದರು.

ADVERTISEMENT

ಈ ಮಹನೀಯರತ್ಯಾಗ ಬಲಿದಾನವೇ ನಮಗೆ ಸ್ಪೂರ್ತಿ. ಸ್ವಾತಂತ್ರ್ಯ ಉಳಿಸಿಕೊಂಡು ದೇಶದ ಕೀರ್ತಿ ಹೆಚ್ಚಿಸಬೇಕು ಎಂದರು. ಸ್ವಾತಂತ್ರ್ಯ ಹೋರಾಟಗಾರರ ಇತಿಹಾಸ ವನ್ನು ಮಕ್ಕಳಿಗೆ ಪರಿಚಯ ಮಾಡಿಸಿಕೊಡಬೇಕಾಗಿದೆ. ಪರಿಣತರಿಂದ ಶಾಲಾ ಕಾಲೇಜುಗಳಲ್ಲಿ ಐತಿಹಾಸಿಕ ಹೋರಾಟಗಳ ಬಗ್ಗೆ ತಿಳಿವಳಿಕೆ ಮೂಡಿಸಲಾಗುವುದು ಎಂದು ಹೇಳಿದರು.

ಸರ್ಕಾರ ಈ ಕ್ಷೇತ್ರದ ಅಭಿವೃದ್ಧಿ ಗೆ ಪೂರಕವಾಗಿ ಕೆಲಸ ಮಾಡಲಿದೆ. ಹಂತ ಹಂತವಾಗಿ ಕೆಲಸ ಮಾಡಿಕೊಡಲಿದ್ದೇನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.