ADVERTISEMENT

ಮುಂದಿನ ಮೂರು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ: ಲಕ್ಷ್ಮಣ ಸವದಿ

​ಪ್ರಜಾವಾಣಿ ವಾರ್ತೆ
Published 29 ಜುಲೈ 2020, 10:00 IST
Last Updated 29 ಜುಲೈ 2020, 10:00 IST
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ   

ಬೆಂಗಳೂರು: ನಾಯಕತ್ವ ಬದಲಾವಣೆ ಕುರಿತು ರಾಜ್ಯ ರಾಜಕಾರಣದಲ್ಲಿ ಸಂಚಲನ ಉಂಟಾಗಿರುವಬೆನ್ನಲ್ಲೇ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಪ್ರಶ್ನೆಯೇ ಇಲ್ಲ, ಮುಂದಿನ ಮೂರು ವರ್ಷ ಬಿ.ಎಸ್‌. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.

ಮೂರು ದಿನಗಳಿಂದ ದೆಹಲಿಯಲ್ಲೇ ಬೀಡು ಬಿಟ್ಟಿರುವ ಸವದಿ ಸುದ್ದಿಗಾರರ ಜತೆ ಮಾತನಾಡಿ, ನಾನು ಮುಖ್ಯಮಂತ್ರಿ ಹುದ್ದೆಗೆ ಪ್ರಯತ್ನಿಸುತ್ತಿದ್ದೇನೆ ಎಂಬ ಮಾಧ್ಯಮಗಳ ವರದಿಯಲ್ಲಿ ಯಾವುದೇ ಹುರುಳಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಕುರಿತು ವದಂತಿ ಹರಡಲಾರಂಭಿಸಿತು. ಅದರಲ್ಲಿ ಸತ್ಯ ಇಲ್ಲ. ಇಲಾಖೆ ಕೆಲಸಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿ ಮಾಡುವ ಉದ್ದೇಶದಿಂದ ದೆಹಲಿಗೆ ಬಂದಿದ್ದೇನೆ. ಯಡಿಯೂರಪ್ಪ ನಮ್ಮ ನಾಯಕರು. ಅವರು ಮುಂದಿನ ಮೂರು ವರ್ಷ ಮುಖ್ಯಮಂತ್ರಿ ಆಗಿಯೇ ಇರುತ್ತಾರೆ ಎಂದು ಹೇಳಿದರು.

ADVERTISEMENT

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರ ಮೂರು ವರ್ಷಗಳಲ್ಲಿ ಮಾಡಿರುವ ಸಾಧನೆಗಳನ್ನು ಅವರ ಗಮನಕ್ಕೆ ತಂದಿದ್ದೇನೆ. ಯಡಿಯೂರಪ್ಪ ಅವರಿಗೆ ಶುಭಾಶಯಗಳನ್ನು ಕೋರಿದ್ದಾರೆ.

ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದೆ. ಕಾರ್ಯದ ಒತ್ತಡದ ಕಾರಣ ಭೇಟಿಗೆ ಅವಕಾಶ ಸಿಗಲಿಲ್ಲ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.