ADVERTISEMENT

ಡಿಸಿಎಂ ಹುದ್ದೆ: ಪಕ್ಷದ ತೀರ್ಮಾನಕ್ಕೆ ಬದ್ಧ ಎಂದ ಸಚಿವ ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 30 ಜನವರಿ 2020, 8:56 IST
Last Updated 30 ಜನವರಿ 2020, 8:56 IST
ಬಿ. ಶ್ರೀರಾಮುಲು
ಬಿ. ಶ್ರೀರಾಮುಲು   

ಕಲಬುರ್ಗಿ: ಸಚಿವ ಸಂಪುಟ ವಿಸ್ತರಣೆ ‌ಸಂದರ್ಭದಲ್ಲಿ‌ ಡಿಸಿಎಂ ಹುದ್ದೆಯನ್ನು ವಾಲ್ಮೀಕಿ ಸಮುದಾಯಕ್ಕೆ ‌ನೀಡಬೇಕು ಎಂದು ವಾಲ್ಮೀಕಿ ‌ಪೀಠದ ಸ್ವಾಮೀಜಿ ಅವರು ಹೇಳಿದ್ದಾರೆ. ಆದಾಗ್ಯೂ ‌ಪಕ್ಷ ಕೈಗೊಳ್ಳುವ ‌ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಆರೋಗ್ಯ ‌ಮತ್ತು‌ ಕುಟುಂಬ ಕಲ್ಯಾಣ ‌ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ‌ ಮಾತನಾಡಿದ ಅವರು, ‘ಮುಖ್ಯಮಂತ್ರಿ ಅವರು ದೆಹಲಿಗೆ ತೆರಳಿದ್ದಾರೆ.
ತಿಂಗಳ ಕೊನೆಯಲ್ಲಿ ಅಥವಾ ಫೆಬ್ರವರಿ ಮೊದಲವಾರ ಸಂಪುಟ ವಿಸ್ತರಣೆಯಾಗಲಿದೆ. ಉಪ ಮುಖ್ಯಮಂತ್ರಿ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ. ಪಕ್ಷದ ತೀರ್ಮಾನಕ್ಕೆ ನಾವು ಬದ್ದ. ಪಕ್ಷಕ್ಕೆ ಯಾರಿಗೆ ಏನು ಮಾಡಬೇಕು ಅಂತ ಗೊತ್ತಿದೆ’ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವೈದ್ಯರ ನೇಮಕಕ್ಕೆ ಸಂಪುಟ ಒಪ್ಪಿಗೆ: ನೇರ ನೇಮಕಾತಿ ಮೂಲಕ ಎರಡು ಸಾವಿರಕ್ಕೂ ಹೆಚ್ಚು ವೈದ್ಯರ ನೇಮಕಕ್ಕೆ ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ಪಡೆಯಲಾಗಿದೆ. ಆದಷ್ಟು ಬೇಗನೆ ವೈದ್ಯರ ನೇಮಕವಾಗಲಿದೆ ಎಂದು ಶ್ರೀರಾಮುಲು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.