ADVERTISEMENT

ಪಕ್ಷ ಸೂಚಿಸಿದರೆ ಬಾದಾಮಿಯಲ್ಲಿ ಸ್ಪರ್ಧೆ: ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 13 ಜುಲೈ 2021, 20:07 IST
Last Updated 13 ಜುಲೈ 2021, 20:07 IST
ಶ್ರೀರಾಮುಲು
ಶ್ರೀರಾಮುಲು   

ಮೊಳಕಾಲ್ಮುರು: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಪಕ್ಷದ ವರಿಷ್ಠರು ಸೂಚಿಸಿದರೆ ಖಂಡಿತ ಕಣದಲ್ಲಿರುತ್ತೇನೆ’ ಎಂದು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ತಿಳಿಸಿದರು.

ತಾಲ್ಲೂಕಿನ ಹಿರೇಹಳ್ಳಿ ಸಮೀಪ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಾದಾಮಿ ಕ್ಷೇತ್ರದಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪರ್ಧಿಸಲಿ. ಅದು ಅವರ ವೈಯಕ್ತಿಕ ನಿರ್ಧಾರ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT