ADVERTISEMENT

ಬೆಂಬಲಿಗರೊಂದಿಗೆ ಬಿ.ವೈ. ವಿಜಯೇಂದ್ರ ದೆಹಲಿಗೆ ದಿಢೀರ್ ಭೇಟಿ

​ಪ್ರಜಾವಾಣಿ ವಾರ್ತೆ
Published 1 ಜೂನ್ 2021, 3:10 IST
Last Updated 1 ಜೂನ್ 2021, 3:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಂಗಳವಾರ ಬೆಳಿಗ್ಗೆ ದೆಹಲಿಗೆ ಆಗಮಿಸಿದ್ದಾರೆ.

ಬೆಂಗಳೂರಿನಿಂದ ಬೆಳಿಗ್ಗೆ 5.30ಕ್ಕೆ ತಮ್ಮ ಕೆಲವು ಬೆಂಬಲಿಗರೊಂದಿಗೆ ವಿಮಾನದಲ್ಲಿ ಹೊರಟಿದ್ದ ವಿಜಯೇಂದ್ರ ಅವರು 8 ಗಂಟೆಗೆ ದೆಹಲಿ ತಲುಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ADVERTISEMENT

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗುವ ಸಾಧ್ಯತೆ ಇದೆ ಎಂಬ ಮಾತುಗಳು ಇತ್ತೀಚೆಗಷ್ಟೇ ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ, ವಿಜಯೇಂದ್ರ ಅವರ ಈ ದಿಢೀರ್‌ ಭೇಟಿಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಮೇ ಎರಡನೇ ವಾರದಲ್ಲೂ ಸಚಿವ ಬಸವರಾಜ್‌ ಬೊಮ್ಮಾಯಿ ಅವರೊಂದಿಗೆ ದೆಹಲಿಗೆ ಬಂದಿದ್ದ ವಿಜಯೇಂದ್ರ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಚರ್ಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.