ADVERTISEMENT

ಬಾಬಾಬುಡನ್‌ಗಿರಿ ವ್ಯವಸ್ಥಾಪನಾ ಸಮಿತಿ ಸದಸ್ಯರ ನೇಮಕ: ಹೈಕೋರ್ಟ್‌ಗೆ ಮಾಹಿತಿ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2022, 20:03 IST
Last Updated 22 ಆಗಸ್ಟ್ 2022, 20:03 IST
   

ಬೆಂಗಳೂರು: ‘ಚಿಕ್ಕಮಗಳೂರು ಜಿಲ್ಲೆಯ ಶ್ರೀಗುರು ದತ್ತಾತ್ರೇಯ ಬಾಬಾ ಬುಡನ್‌ಗಿರಿ ಸ್ವಾಮಿ ದರ್ಗಾದಲ್ಲಿ ಮುಸ್ಲಿಂ ಮತ್ತು ಹಿಂದೂ ಧರ್ಮಗಳ ಸಂಪ್ರದಾಯದಂತೆ ಪೂಜಾವಿಧಿ ನೆರ ವೇರಿಸುವ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ‘ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಮೌಲ್ವಿ ಸೈಯದ್‌ ಗೌಸ್ ಮೊಹಿಯುದ್ದೀನ್‌ ಶಾಖಾದ್ರಿ ಸಲ್ಲಿಸಿರುವ ಮೇಲ್ಮನವಿಯನ್ನುಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಆರಾಧೆ ನೇತೃತ್ವದ ಪೀಠ ವಿಚಾರಣೆ ನಡೆಸಿತು. ಅಡ್ವೊಕೇಟ್ ಪ್ರಭುಲಿಂಗ ಕೆ.ನಾವದಗಿ, ಈ ಸಂಬಂಧ ನ್ಯಾಯಪೀಠಕ್ಕೆ ಮೆಮೊ ಸಲ್ಲಿಸಿವಿವರಣೆ ನೀಡಿದರು.ಮೇಲ್ಮನವಿ ಪರ ವಕೀಲರು, ಸಮಯಾವಕಾಶ ಕೋರಿದ್ದರಿಂದ ವಿಚಾರಣೆಯನ್ನು ಸೆ. 5ಕ್ಕೆ ಮುಂದೂಡಿ ‘ಈಗಿನ ಪೂಜಾ ಪದ್ಧ ತಿಯೇ ಮುಂದುವರಿಯಲಿ’ ಎಂದಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT