ADVERTISEMENT

ಹಿರಿಯ ವಕೀಲ ಮಧೂಸೂದನ್‌ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 31 ಜನವರಿ 2025, 15:20 IST
Last Updated 31 ಜನವರಿ 2025, 15:20 IST
ಮಧುಸೂದನ್‌
ಮಧುಸೂದನ್‌   

ಬೆಂಗಳೂರು: ಹಿರಿಯ ವಕೀಲ ಮಧುಸೂದನ್‌ ಆರ್‌. ನಾಯ್ಕ್‌ ಅವರನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಉತ್ತರ ಕನ್ನಡ ಜಿಲ್ಲೆ ಕುಮಟಾದ ಮಧುಸೂದನ್‌ ನಾಯ್ಕ್‌ ಅವರು ಹಿಂದೆ ಅಡ್ವೋಕೇಟ್‌ ಜನರಲ್‌ ಹಾಗೂ  ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾಗಿಯೂ ಆಗಿಯೂ ಕಾರ್ಯನಿರ್ವಹಿಸಿದ್ದರು.

ಕೆ. ಜಯಪ್ರಕಾಶ್‌ ಹೆಗ್ಡೆ ಅವರ ಅವಧಿ ಮುಗಿದ ನಂತರ ಆಯೋಗದ ಅಧ್ಯಕ್ಷ ಸ್ಥಾನ ಖಾಲಿ ಇತ್ತು. ಈಗ ಆ ಹುದ್ದೆಯನ್ನು ಭರ್ತಿ ಮಾಡಲಾಗಿದೆ. ಅಧಿಕಾರ ವಹಿಸಿಕೊಂಡ ದಿನದಿಂದ ಮೂರು ವರ್ಷ ಅವರು ಕರ್ತವ್ಯ ನಿರ್ವಹಿಸಲಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.