ADVERTISEMENT

ಬಗರ್‌ ಹುಕುಂ ಜಮೀನು ಮಂಜೂರು: 6 ತಿಂಗಳ ಗಡುವು

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2025, 0:04 IST
Last Updated 29 ಮಾರ್ಚ್ 2025, 0:04 IST
<div class="paragraphs"><p>ತಹಶೀಲ್ದಾರ್‌ಗಳ ಜೊತೆ ಕಂದಾಯ ಸಚಿವ‌ ಕೃಷ್ಣ ಬೈರೇಗೌಡ ಅವರು ವಿಡಿಯೊ ಸಂವಾದ‌‌ ನಡೆಸಿದರು. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತ ಸುನೀಲ್ ಕುಮಾರ್ ಇದ್ದರು</p></div>

ತಹಶೀಲ್ದಾರ್‌ಗಳ ಜೊತೆ ಕಂದಾಯ ಸಚಿವ‌ ಕೃಷ್ಣ ಬೈರೇಗೌಡ ಅವರು ವಿಡಿಯೊ ಸಂವಾದ‌‌ ನಡೆಸಿದರು. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತ ಸುನೀಲ್ ಕುಮಾರ್ ಇದ್ದರು

   

ಬೆಂಗಳೂರು: ‘ಬಗರ್‌ಹುಕುಂ ಅಡಿಯಲ್ಲಿ ಅರ್ಹ ರೈತರಿಗೆ ಭೂ ಮಂಜೂರು ಮಾಡುವ ಕೆಲಸ ನಿರೀಕ್ಷೆ ಮಟ್ಟದಲ್ಲಿ ನಡೆಯುತ್ತಿಲ್ಲ. ಆರು ತಿಂಗಳಲ್ಲಿ ಎಲ್ಲ ಅರ್ಹರಿಗೂ ಜಮೀನು ಮಂಜೂರು ಮಾಡಬೇಕು’ ಎಂದು ತಹಶೀಲ್ದಾರ್‌ ಗಳಿಗೆ ಕಂದಾಯ ಸಚಿವ‌ ಕೃಷ್ಣ ಬೈರೇಗೌಡ ಸೂಚನೆ ನೀಡಿದರು.

ತಹಶೀಲ್ದಾರ್‌ಗಳ ಜೊತೆ ಶುಕ್ರವಾರ ವಿಡಿಯೊ ಸಂವಾದ‌‌ ನಡೆಸಿದ ಅವರು, ‘ಬಗರ್ ಹುಕುಂ ಬಡವರ ಕೆಲಸ. ಕೆಲ ಅಧಿಕಾರಿಗಳು ಅಸಡ್ಡೆ ತೋರುತ್ತಿದ್ದಾರೆ. 15 ದಿನಗಳಿಗೊಮ್ಮೆ ಶಾಸಕರ ನೇತೃತ್ವ
ದಲ್ಲಿ ಸಭೆ ನಡೆಸಿ, ಅರ್ಹರಿಗೆ ಜಮೀನು ಮಂಜೂರು ಮಾಡಬೇಕು’ ಎಂದು ಸೂಚಿಸಿದರು.

ADVERTISEMENT

‘ರೈತರು ತಮ್ಮ ಪಾಲಿನ ಜಮೀನು ಇದ್ದರೂ ಪೋಡಿಯಾಗದೆ ಸರ್ಕಾರಿ ಕಚೇರಿಗಳಿಗೆ ಸುತ್ತುತ್ತಿದ್ದಾರೆ. ತಹಶೀಲ್ದಾ ರರು ನಿಗದಿತ ಜಮೀನಿಗೆ ಸಂಬಂಧಿಸಿದ ನಮೂನೆ 1-5 ದಾಖಲೆಯನ್ನು ಸಿದ್ದಪಡಿಸಿ ಮುಂದಿನ ಹಂತದ ನಮೂನೆ 6-10 ಕೆಲಸಕ್ಕೆ ಭೂ ಮಾಪನ ಇಲಾಖೆಗೆ ಕಡತ ಕಳುಹಿಸಬೇಕು. ಆದರೆ, ಬಹುತೇಕ ಜಿಲ್ಲೆಗಳಲ್ಲಿ ಈ ಕಾರ್ಯ ಸಮಾಧಾನಕರ ಆಗಿಲ್ಲ’ ಎಂದು ಸಚಿವರು ಅಸಮಾಧಾನ ಹೊರಹಾಕಿದರು.

‘ಮುಂದಿನ ತಿಂಗಳು ಮಂಗಳೂರಿಗೆ ಮುಖ್ಯಮಂತ್ರಿ ಭೇಟಿ ನೀಡಲಿದ್ದು, ಅಷ್ಟರಲ್ಲಿ 10 ಸಾವಿರ ಪ್ರಕರಣಗಳು ದುರಸ್ತಿಗೊಂಡು ರೈತರಿಗೆ ದಾಖಲೆ ನೀಡಬೇಕು’ ಎಂದು ದಕ್ಷಿಣ ಕನ್ನಡ ಜಿಲ್ಲೆಯ ತಹಶೀಲ್ದಾರರಿಗೆ ಸಚಿವರು ಗುರಿ ನಿಗದಿಪಡಿಸಿದರು. ‘ತಹಶೀಲ್ದಾರ್ ಕಚೇರಿಗಳಲ್ಲಿ ಭೂ ದಾಖಲೆಗಳನ್ನು ಅಭಿಯಾನದಂತೆ ಸ್ಕ್ಯಾನ್ ಮಾಡಿ ಡಿಜಿಟಲೀಕರಣಗೊಳಿಸಲಾಗುತ್ತಿದೆ. ಈ ಕೆಲಸದಲ್ಲೂ ಕೆಲವು ತಹಶೀಲ್ದಾರರು ಅಸಡ್ಡೆ ತೋರಿಸುತ್ತಿದ್ದಾರೆ. ಅಂಥವರಿಗೆ ನೊಟೀಸ್ ನೀಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಪ್ರತಿ ತಹಶೀಲ್ದಾರ್ ಕಚೇರಿಗೂ ದಿನಕ್ಕೆ 6 ಸಾವಿರ ಪುಟಗಳನ್ನು ಸ್ಕ್ಯಾನ್ ಮಾಡುವ ಗುರಿ ನೀಡಲಾಗಿತ್ತು. ಚಳ್ಳಕೆರೆ, ಮೊಳಕಾಲ್ಮೂರು, ಕೊಪ್ಪ, ಕೊಪ್ಪಳ, ಹೊನ್ನಾವರ ಕಚೇರಿಗಳಲ್ಲಿ 9 ಸಾವಿರ ಪುಟ ಸ್ಕ್ಯಾನ್ ಮಾಡಲಾಗುತ್ತಿದೆ.  ಉಳಿದವರಿಗೆ ಆಗುತ್ತಿಲ್ಲ ಎಂದರೆ ಏನರ್ಥ’ ಎಂದು ಸಚಿವರು ಆಕ್ರೋಶ ಹೊರಹಾಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.