ಬೆಂಗಳೂರು: ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವವರು ಮಂಜೂರಾತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೆ ಎರಡು ವರ್ಷ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
‘ಕರ್ನಾಟಕ ಭೂ ಮಂಜೂರಾತಿ (ಎರಡನೇ ತಿದ್ದುಪಡಿ) ನಿಯಮಗಳು–2020’ಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಬಗರ್ ಹುಕುಂ ಸಾಗುವಳಿ ಮಾಡುತ್ತಿರುವವರು ಮಂಜೂರಾತಿಗೆ ಕೋರಿ ನಮೂನೆ 50ರಲ್ಲಿ ಅರ್ಜಿ ಸಲ್ಲಿಸಲು ಒಂದು ವರ್ಷ ಅವಕಾಶ ವಿಸ್ತರಿಸಲಾಗಿತ್ತು. ಆ ಬಳಿಕ ಸರ್ಕಾರಗಳು ಬದಲಾದವು. 50 ರ ಅಡಿ ಸಲ್ಲಿಕೆಯಾಗಿರುವ ಅರ್ಜಿಗಳ ಇತ್ಯರ್ಥವಾಗಿಲ್ಲ. ಇನ್ನಷ್ಟು ಅವಕಾಶ ಬೇಕು ಎಂಬ ಬೇಡಿಕೆ ಇದ್ದುದರಿಂದ ಅವಧಿ ವಿಸ್ತರಣೆ ಮಾಡಲು ನಿರ್ಧರಿಸಲಾಯಿತು ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.