ಉಡುಪಿ: ಭಾರಿ ಮಳೆಗೆ ಸ್ವರ್ಣಾ ನದಿ ತುಂಬಿ ಹರಿಯುತ್ತಿದ್ದು, ಉಡುಪಿ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ನೀರು ಪೂರೈಕೆ ಮಾಡುವ ಬಜೆ ಕಿರು ಜಲಾಶಯ ಗರಿಷ್ಠ ಮಟ್ಟ ತಲುಪಿದೆ.
ಇದೇ ಮೊದಲ ಬಾರಿಗೆ ಜಲಾಶಯದ ನೀರಿನ ಮಟ್ಟ 10.5 ಮೀಟರ್‌ಗೆ ತಲುಪಿದೆ ಎಂದು ಜಲಾಶಯದ ಎಂಜಿನಿಯರ್ ತಿಳಿಸಿದ್ದಾರೆ. ಒಳಹರಿವು ಹೆಚ್ಚಾಗಿರುವುದರಿಂದ ಜಲಾಶಯದಿಂದ ನೀರೆತ್ತಲು ಸಾದ್ಯವಾಗುತ್ತಿಲ್ಲ. ಭಾನುವಾರ ಬೆಳಿಗ್ಗಿನಿಂದ ನೀರೆತ್ತುವ ಕಾರ್ಯ ಸ್ಥಗಿತವಾಗಿದ್ದು, ಉಡುಪಿ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ನೀರು ಸರಬರಾಜು ಮಾಡಲಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.