ADVERTISEMENT

ಹರ್ಷ ಕೊಲೆ ಪ್ರಕರಣ: ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ ಎಂದ ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2022, 9:34 IST
Last Updated 23 ಫೆಬ್ರುವರಿ 2022, 9:34 IST
ಬಸವರಾಜ ಬೊಮ್ಮಾಯಿ – ಪ್ರಜಾವಾಣಿ ಸಂಗ್ರಹ ಚಿತ್ರ
ಬಸವರಾಜ ಬೊಮ್ಮಾಯಿ – ಪ್ರಜಾವಾಣಿ ಸಂಗ್ರಹ ಚಿತ್ರ   

ಬೆಂಗಳೂರು: ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದಲ್ಲಿ ಹಲವಾರು ಜನರನ್ನು ಬಂಧಿಸಲಾಗಿದೆ. ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತ್ವರಿತವಾಗಿ ತನಿಖೆ ನಡೆಯುತ್ತಿದೆ. ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದು ನಿರ್ಧಾರವಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ. ಕರ್ಫ್ಯೂ ಸಹ ಜಾರಿಯಲ್ಲಿದೆ ಎಂದು ತಿಳಿಸಿದರು.

‘ಕಾಂಗ್ರೆಸ್ ಅನುಭವದ ಮಾತು’

ADVERTISEMENT

ಇದು ಸರ್ಕಾರಿ ಪ್ರಾಯೋಜಿತ ಮೆರವಣಿಗೆ, ಸೆಕ್ಷನ್ 144 ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು, ಕಾಂಗ್ರೆಸ್‌ನವರು ಈ ಹಿಂದೆ ಸರ್ಕಾರಿ ಪ್ರಾಯೋಜಿತ ಕೆಲಸಗಳನ್ನು ಮಾಡಿದ್ದಾರೆ. ಅದರ ಅನುಭವದಿಂದ ಆ ಮಾತುಗಳನ್ನು ಆಡಿದ್ದಾರೆ ಎಂದರು.

ದೆಹಲಿ ಪ್ರಯಾಣದ ಬಗ್ಗೆ ಪ್ರತ್ರಕರ್ತರ ಪ್ರಶ್ನೆಗೆ ಉತ್ತರಿಸಿ 'ಸದ್ಯಕ್ಕೆ ದೆಹಲಿಗೆ ಹೋಗುವ ಉದ್ದೇಶ ಇಲ್ಲ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.