ಎಂ.ಬಿ. ಪಾಟೀಲ
ಬೆಂಗಳೂರು: ‘ಬಲ್ದೋಟ ಉಕ್ಕಿನ ಕಾರ್ಖಾನೆಯಿಂದ ಮಾಲಿನ್ಯ ಹೆಚ್ಚಾಗಲಿದೆ ಎಂಬುದರ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಯುತ್ತಿದ್ದು, ಆ ವರದಿಯನ್ನು ಆಧಿರಿಸಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕೊಪ್ಪಳದಲ್ಲಿ ಬಲ್ದೋಟ ಸಮೂಹವು ₹54,000 ಕೋಟಿ ಹೂಡಿಕೆ ಮಾಡಿ, ಬಹುದೊಡ್ಡ ಉಕ್ಕಿನ ಕಾರ್ಖಾನೆ ಸ್ಥಾಪಿಸುತ್ತಿದೆ. ಆದರೆ ಅದರಿಂದ ಮಾಲಿನ್ಯ ಉಂಟಾಗಲಿದೆ ಎಂದು ಗವಿಮಠದ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಅದನ್ನೂ ನಾನು ಕೂಲಂಕಷವಾಗಿ ಪರಿಶೀಲಿಸಿದ್ದೇನೆ’ ಎಂದರು.
‘ಮಾಲಿನ್ಯದ ಬಗ್ಗೆ ಅಧ್ಯಯನ ನಡೆಸಲು ಐಐಎಸ್‌ಸಿಯಂತಹ ಸ್ವತಂತ್ರ ಸಂಸ್ಥೆಗೆ ಸೂಚಿಸಲಾಗಿದೆ. ಒಬ್ಬ ಸಚಿವನಾಗಿ ನನಗೆ ಉದ್ಯಮಗಳು ಬೆಳೆಯಬೇಕಾದ ಅನಿವಾರ್ಯ ಮತ್ತು ಸಾರ್ವಜನಿಕರ ಧ್ವನಿ ಎರಡೂ ಅರ್ಥವಾಗುತ್ತವೆ. ಇದರಲ್ಲಿ ರಾಜಕೀಯವೇನೂ ಇಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.