
ಪ್ರಜಾವಾಣಿ ವಾರ್ತೆಘಟನಾ ಸ್ಥಳದಲ್ಲಿ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ
– ಪ್ರಜಾವಾಣಿ ಚಿತ್ರ
ಬಳ್ಳಾರಿ: ಬಳ್ಳಾರಿ ದೊಂಬಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಖೆ ನಡೆಸುತ್ತಿರುವ ಪೊಲೀಸರು ಸೋಮವಾರ ಬಾಂಬ್ ನಿಷ್ಕ್ರಿಯ ದಳವನ್ನು ಕರೆಸಿ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿಯಿಂದ ದಳವನ್ನು ಕರೆಸಲಾಗಿದೆ. ಘಟನೆಯ ದಿನ ಸ್ಥಳದಲ್ಲಿ ಹಾರಿದ ಗುಂಡು, ಅದರ ಲೋಹ ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಜನವರಿ 1 ರಂದು ಶಾಸಕ ಜನಾರ್ದನ ರೆಡ್ಡಿ ನಿವಾಸದ ಎದುರೇ ದೊಂಬಿ ನಡೆದಿತ್ತು. ಅದರಲ್ಲಿ ಒಬ್ಬ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದರು.