
ಪ್ರಜಾವಾಣಿ ವಾರ್ತೆ
ಬೆಂಗಳೂರು: ಬಳ್ಳಾರಿ ಗಲಾಟೆ ಕುರಿತಾಗಿ ಸ್ಥಳೀಯ ಪರಿಸ್ಥಿತಿಯನ್ನು ಅವಲೋಕಿಸಲು ಕಾಂಗ್ರೆಸ್ ಸತ್ಯಶೋಧನಾ ಸಮಿತಿಯನ್ನು ರಚಿಸಿದೆ.
ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ, ಶಾಸಕ ಟಿ.ರಘುಮೂರ್ತಿ, ಸಂಸದ ಕುಮಾರ್ ನಾಯಕ್, ವಿಧಾನ ಪರಿಷತ್ ಸದಸ್ಯರಾದ ಜಕ್ಕಪ್ಪನವರ್ ಮತ್ತು ಬಸನಗೌಡ ಬಾದರ್ಲಿ ಅವರು
ಸಮಿತಿಯಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.