ADVERTISEMENT

ಆನ್‌ಲೈನ್ ಶಿಕ್ಷಣ ನಿಷೇಧ: ರಾಜ್ಯ ಸರ್ಕಾರದ ವಿವರಣೆ ಕೇಳಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 22 ಜೂನ್ 2020, 10:44 IST
Last Updated 22 ಜೂನ್ 2020, 10:44 IST
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್   

ಬೆಂಗಳೂರು: ಕೋವಿಡ್-19ರ ಹಿನ್ನೆಲೆಯಲ್ಲಿ 1ರಿಂದ 5ನೇ ತರಗತಿಗೆ ಆನ್‌ಲೈನ್ ಶಿಕ್ಷಣ ನಿಷೇಧಿಸಿ ರಾಜ್ಯ ಸರ್ಕಾರ ಜೂನ್ 15 ರಂದು ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಿಚಾರಣೆ ನಡೆಸಿತು.

'ಸೀಮಿತ ಅವಧಿಗೆ ಆನ್‌ಲೈನ್ ಶಿಕ್ಷಣಕ್ಕೆ ಅವಕಾಶ ನೀಡಬಹುದೇ ಮತ್ತು ಕರ್ನಾಟಕ ಶಿಕ್ಷಣ ಕಾಯ್ದೆ ವ್ಯಾಪ್ತಿಗೆ ಒಳಪಡದ ಐಸಿಎಸ್ಇ ಹಾಗೂ ಸಿಬಿಎಸ್‌ಇ ಪಠ್ಯಕ್ರಮದ ಶಾಲೆಗಳಿಗೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಹೇಗೆ ಅನ್ವಯವಾಗಲಿದೆ ಎಂಬ ಬಗ್ಗೆ ವಿವರಣೆ ನೀಡಿ' ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT