ADVERTISEMENT

ಪಿಎಫ್‌ಐ ನಿಷೇಧ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2022, 19:01 IST
Last Updated 28 ನವೆಂಬರ್ 2022, 19:01 IST
   

ಬೆಂಗಳೂರು: ಪಾಪ್ಯುಲರ್‌ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಲಾದ ಅರ್ಜಿಯ ವಿಚಾರಣೆಯನ್ನು ಸೋಮವಾರ ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಈ ಸಂಬಂಧ ಪಿಎಫ್‌ಐರಾಜ್ಯ ಘಟಕದ ಅಧ್ಯಕ್ಷ ನಾಸಿರ್‌ ಅಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಉಭಯತ್ರರ ವಾದ- ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿತು.

ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್‌. ಪಾಟೀಲ್ ಹಾಗೂ ‌ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.

ADVERTISEMENT

‘ಹಲವು ಭಯೋತ್ಪಾದಕ ಸಂಘಟ
ನೆಗಳ ಜೊತೆ ನಿಕಟ ಸಂಪರ್ಕವಿದೆ‘ ಎಂಬ ಆರೋಪದ ಹಿನ್ನೆಲೆಯಲ್ಲಿ ಪಿಎಫ್‌ಐ
ಸಂಘಟನೆಯನ್ನು ನಿಷೇಧಿಸಿಕೇಂದ್ರ ಸರ್ಕಾರ ಸೆಪ್ಟೆಂಬರ್ 28ರಂದು ಆದೇಶಿ
ಸಿತ್ತು.ದೇಶದಾದ್ಯಂತ ಸಂಘಟನೆಯ ಕಚೇರಿ, ಅದರ ಮುಖಂಡರ ನಿವಾಸಗಳ ಮೇಲೆ ದಾಳಿ ನಡೆಸಿದ ನಂತರ ಸರ್ಕಾರ ಈ ಕ್ರಮಕ್ಕೆ ಮುಂದಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.