ADVERTISEMENT

ಕೊಡಗು ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2021, 14:24 IST
Last Updated 3 ಏಪ್ರಿಲ್ 2021, 14:24 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಮಡಿಕೇರಿ: ಕೊಡಗು ಜಿಲ್ಲೆಯಲ್ಲೂ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ, ಏ.20ರ ತನಕ ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಶನಿವಾರ‌ ಆದೇಶಿಸಿದ್ದಾರೆ.

ರಾಜಾಸೀಟ್‌, ಮಾಂದಲ್‌ಪಟ್ಟಿ, ತಲಕಾವೇರಿ, ಅಬ್ಬಿ ಹಾಗೂ ಇರ್ಫು ಜಲಪಾತ, ರಾಜರ ಗದ್ದುಗೆ, ದುಬಾರೆ, ಕಾವೇರಿ ನಿಸರ್ಗಧಾಮಕ್ಕೆ ಪ್ರವಾಸಿಗರು ಹಾಗೂ ಸಾರ್ವಜನಿಕರ ಭೇಟಿ ನಿಷೇಧಿಸಲಾಗಿದೆ. ಆದೇಶ ಉಲ್ಲಂಘಿಸಿದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT