ADVERTISEMENT

ಬಂದ್‌ಗೆ ಚಾಲಕರ ಒಕ್ಕೂಟ ಬೆಂಬಲ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2020, 20:07 IST
Last Updated 10 ಫೆಬ್ರುವರಿ 2020, 20:07 IST

ಬೆಂಗಳೂರು: ಸರೋಜಿನಿ ಮಹಿಷಿ ವರದಿ ಜಾರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇದೇ 13ರಂದು ನಡೆಯಲಿರುವ ಕರ್ನಾಟಕ ಬಂದ್‌ಗೆ ರಾಜ್ಯ ಸರ್ಕಾರ ಹಾಗೂ ಸ್ವಾಮ್ಯ ಸಂಘ ಸಂಸ್ಥೆಗಳ ವಾಹನ ಚಾಲಕರ ಒಕ್ಕೂಟ ಬೆಂಬಲ ಸೂಚಿಸಿದೆ.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಎಂ.ಎನ್.ವೇಣುಗೋಪಾಲ್, ‘ಮಾತೃ ಭಾಷೆಯಲ್ಲಿ ಕಲಿತವರಿಗೆ ಸ್ಥಳೀಯವಾಗಿ ಉದ್ಯೋಗಗಳು ಸಿಗುತ್ತಿಲ್ಲ. ಅನ್ಯ ಭಾಷಿಕರ ಎದುರು ಕನ್ನಡಿಗರು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದಾರೆ.ಈ ವರದಿ ಜಾರಿ ಮಾಡುವುದರಿಂದ‌ ಕನ್ನಡಿಗರಿಗೆ ಉದ್ಯೋಗ ಸಿಗಲಿದೆ’ ಎಂದರು.

ಉರುಳು ಸೇವೆ: ‘ಬಂದ್‌ಗೆ ಸರ್ವ ಸಂಘಟನೆಗಳ ಒಕ್ಕೂಟ ಬೆಂಬಲಿಸುವುದಿಲ್ಲ’ ಎಂದು ಒಕ್ಕೂಟದ ಅಧ್ಯಕ್ಷ ರಂಗೇಗೌಡ ತಿಳಿಸಿದರು.

ADVERTISEMENT

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಂದ್‌ ನಡೆಸುವುದರಿಂದ ಅಪಾರ ಆರ್ಥಿಕ ನಷ್ಟವಾಗಲಿದೆ. ಇಂತಹ ಬಂದ್‌ಗಳಿಗೆ ನಮ್ಮ ಸಂಘಟನೆಯ ಬೆಂಬಲವಿಲ್ಲ. ಕರ್ನಾಟಕದಲ್ಲಿ ಕನ್ನಡಿಗರಿಗೆ ಶೇ 100ರಷ್ಟು ಉದ್ಯೋಗದಲ್ಲಿ ಮೀಸಲಾತಿಗೆ ಒತ್ತಾಯಿಸಿ ವಿವಿಧ ಭಾಗಗಳಲ್ಲಿ ಉರುಳು ಸೇವೆ ಮಾಡಲಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.