ಬೆಂಗಳೂರು: ಬೆಂಗಳೂರು– ಮಂಗಳೂರು ರಾಷ್ಟ್ರಿಯ ಹೆದ್ದಾರಿಯ ಹಾಸನ– ಸಕಲೇಶಪುರ ಮತ್ತು ಅಡ್ಡಹೊಳೆ ವ್ಯಾಪ್ತಿಯಲ್ಲಿ ಹೆದ್ದಾರಿಯು ಹದಗೆಟ್ಟಿರುವುದರಿಂದ ತಕ್ಷಣವೇ ಅಲ್ಲಿ ದುರಸ್ತಿ ಕಾಮಗಾರಿ ಕೈಗೆತ್ತಿಕೊಳ್ಳಬೇಕೆಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಮತ್ತು ಇಂಧನ ಸಚಿವ ವಿ.ಸುನಿಲ್ ಕುಮಾರ್ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.
ಲೋಕೋಪಯೋಗಿ ಸಚಿವರ ಕಚೇರಿಯಲ್ಲಿ ಗುರುವಾರ ಈ ಕುರಿತು ನಡೆದ ಸಭೆಯಲ್ಲಿ ಹೆದ್ದಾರಿ ಸಮಸ್ಯೆಯ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು.
ಶಿಥಿಲಗೊಂಡ ಹೆದ್ದಾರಿಯಿಂದಾಗಿ ವಾಹನಗಳಿಗೆ ಆ ಭಾಗದಲ್ಲಿ ಸಂಚರಿಸುವುದೇ ಕಷ್ಟವಾಗಿದೆ. ಈ ಬಗ್ಗೆ ಸಾರ್ವಜನಿಕರಿಂದಲೂ ವ್ಯಾಪಕ ದೂರುಗಳು ಕೇಳಿ ಬಂದಿವೆ. ಇನ್ನೆರಡು ದಿನಗಳೊಳಗೆ ದುರಸ್ತಿ ಕಾರ್ಯವನ್ನು ಆರಂಭಿಸಬೇಕು. ಹತ್ತು ದಿನಗಳಲ್ಲಿ ಹೆದ್ದಾರಿಯನ್ನು ಸುಸ್ಥಿತಿಗೆ ತರಬೇಕೆಂದು ಸಚಿವರು ಗಡುವು ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.