ADVERTISEMENT

ಈ ಎಲ್ಲಾ ರಸ್ತೆಗಳು ಬಂದ್: ಹೊಸ ವರ್ಷಾಚರಣೆಗೆ ತೆರಳುವ ಮುನ್ನ ಈ ಸುದ್ದಿ ಓದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಡಿಸೆಂಬರ್ 2025, 5:35 IST
Last Updated 31 ಡಿಸೆಂಬರ್ 2025, 5:35 IST
ಹೊಸ ವರ್ಷಾಚರಣೆಗೆ ನಗರದ ಕಮರ್ಷಿಯಲ್‌ ಸ್ಟ್ರೀಟ್‌ ಬಣ್ಣ ಬಣ್ಣದ ವಿದ್ಯುತ್‌ ದೀಪಗಳಿಂದ ಅಲಂಕೃತಗೊಂಡಿರುವುದು -ಪ್ರಜಾವಾಣಿ ಚಿತ್ರ/ಪುಷ್ಕರ್‌ ವಿ.
ಹೊಸ ವರ್ಷಾಚರಣೆಗೆ ನಗರದ ಕಮರ್ಷಿಯಲ್‌ ಸ್ಟ್ರೀಟ್‌ ಬಣ್ಣ ಬಣ್ಣದ ವಿದ್ಯುತ್‌ ದೀಪಗಳಿಂದ ಅಲಂಕೃತಗೊಂಡಿರುವುದು -ಪ್ರಜಾವಾಣಿ ಚಿತ್ರ/ಪುಷ್ಕರ್‌ ವಿ.   

ಬೆಂಗಳೂರು: 2025ನೇ ಇಸವಿಗೆ ಬೀಳ್ಕೊಟ್ಟು 2026ರ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಬೆಂಗಳೂರು ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಹಲವು ಮುಂಜಾಗ್ರತಾ ಕ್ರಮಗಳನ್ನು ಪೊಲೀಸ್ ಇಲಾಖೆ ತೆಗೆದುಕೊಂಡಿದೆ.

ಈಗಾಗಲೇ ಸಂಭ್ರಮಾಚರಣೆ ನಡೆಯುವ ಪ್ರಮುಖ ರಸ್ತೆಗಳಲ್ಲಿ ಬಣ್ಣದ ವಿದ್ಯುತ್‌ ದೀಪಗಳ ಅಲಂಕಾರದಿಂದ ಕಂಗೊಳಿಸುತ್ತಿವೆ. ಪಬ್‌, ಕ್ಲಬ್‌, ರೆಸ್ಟೊರೆಂಟ್‌ಗಳು ಬುಧವಾರ ರಾತ್ರಿ ಪಾರ್ಟಿ ಆಯೋಜಿಸಲು ಸಿದ್ಧತೆಗೊಂಡಿವೆ.

ಹೊಸ ವರ್ಷವನ್ನು ಸ್ವಾಗತಿಸಲು ಬುಧವಾರ ರಾತ್ರಿ ಮಹಾತ್ಮ ಗಾಂಧಿ ರಸ್ತೆ, ಚರ್ಚ್‌ ಸ್ಟ್ರೀಟ್‌, ಬ್ರಿಗೇಡ್ ರಸ್ತೆ, ಕೋರಮಂಗಲ, ಒಪೆರಾ ಜಂಕ್ಷನ್‌, ರೆಸ್ಟ್‌ಹೌಸ್ ರಸ್ತೆ, ಸೇಂಟ್‌ ಮಾರ್ಕ್‌ ರಸ್ತೆ, ರಿಚ್ಮಂಡ್‌ ರಸ್ತೆ, ರೆಸಿಡೆನ್ಸಿ ರಸ್ತೆಗೆ ದೊಡ್ಡ ಸಂಖ್ಯೆಯಲ್ಲಿ ಯುವ ಸಮೂಹ ಬರುವ ನಿರೀಕ್ಷೆಯಿದೆ.

ADVERTISEMENT

ಪ್ರಮುಖ ರಸ್ತೆಗಳು ಬಂದ್

ಭದ್ರತಾ ದೃಷ್ಟಿಯಿಂದ ನಗರದ ಕೆಲವು ರಸ್ತೆಗಳು ಬಂದ್ ಮಾಡಿ, ಪಾರ್ಕಿಂಗ್ ನಿಷೇಧ ಮಾಡಲಾಗಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ರೆಸಿಡೆನ್ಸಿ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆಗಳಲ್ಲಿ ರಾತ್ರಿ 10 ರಿಂದ ಮುಂಜಾನೆ 3 ಗಂಟೆವರೆಗೆ ವಾಹನ ಸಂಚಾರ ಬಂದ್ ಆಗಲಿದೆ.

ಪಾರ್ಕಿಂಗ್ ನಿಷೇಧ

ಮೇಲೆ ತಿಳಿಸಿದ ರಸ್ತೆಗಳಲ್ಲಿ ಸಂಜೆ 4 ಗಂಟೆಯಿಂದ ಬೆಳಿಗ್ಗೆ 3 ಗಂಟೆವರೆಗೆ ವಾಹನಗಳ ಪಾರ್ಕಿಂಗ್ ನಿಷೇಧಿಸಲಾಗಿದೆ. ನಗರದ ಮಾಲ್​​ಗಳು ಹಾಗೂ ಜನನಿಬಿಡ ಪ್ರದೇಶಗಳಿಂದ ಕ್ಯಾಬ್ ಪಿಕಪ್ ಹಾಗೂ ಡ್ರಾಪ್ ವ್ಯವಸ್ಥೆ ಮಾಡಲಾಗಿದೆ. ಪೊಲೀಸರು ಗುರುತಿಸಿರುವ ಜಾಗದಲ್ಲಿ ಪಿಕಪ್ ಹಾಗೂ ಡ್ರಾಪ್​ ತೆಗೆದುಕೊಳ್ಳಬಹುದು.

ಈ ರಸ್ತೆಗಳ ಜತೆಗೆ ನಗರದಲ್ಲಿರುವ ಪ್ರಮುಖ 50 ಮೇಲ್ಸೇತುವೆಗಳಲ್ಲಿ ಡಿಸೆಂಬರ್ 31ರ ರಾತ್ರಿ 11 ರಿಂದ ಜನವರಿ 1ರ ಬೆಳಿಗ್ಗೆ 6 ಗಂಟೆವರೆಗೆ ಸಂಚಾರ ನಿರ್ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಏರ್‌ಪೋರ್ಟ್‌ ಫ್ಲೈ ಓವರ್​ಗಳಲ್ಲಿ ಈ ಅವಧಿಯಲ್ಲಿ ಕಾರುಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.