ADVERTISEMENT

ಬೆಂಗಳೂರು ಉತ್ತರ ವಿ.ವಿ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2021, 20:05 IST
Last Updated 18 ಏಪ್ರಿಲ್ 2021, 20:05 IST

ಬೆಂಗಳೂರು: ಸಾರಿಗೆ ನೌಕರರ ಮುಷ್ಕರದಿಂದ ಮುಂದೂಡಿದ್ದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳು ಏ.19ರಿಂದ ಮತ್ತೆ ಆರಂಭಗೊಳ್ಳಲಿವೆ ಎಂದು ಪ್ರಕಟಣೆ ತಿಳಿಸಿದೆ.

‘ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂದೂಡಿದ್ದ ವಿವಿಧ ಕೋರ್ಸ್‌ಗಳ ಒಂದು, ಮೂರು ಹಾಗೂ ಐದನೇ ಸೆಮಿಸ್ಟರ್‌ನ ಪರೀಕ್ಷೆಗಳನ್ನು ಸೋಮವಾರದಿಂದ (ಏ.19) ನಡೆಸಲು ಇತ್ತೀಚಿನ ಸಭೆಯಲ್ಲಿ ನಿರ್ಧರಿಸಲಾಯಿತು. ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಈಗಾಗಲೇ ಕಾಲೇಜುಗಳ ಪ್ರಾಂಶುಪಾಲರಿಗೆ ರವಾನಿಸಲಾಗಿದೆ’.

‘ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ವೆಬ್‌ಸೈಟ್‌ www.bnu.ac.in ಹಾಗೂ ಕಾಲೇಜುಗಳ ವೆಬ್‌ಸೈಟ್‌ಗಳಿಂದಲೂವೇಳಾಪಟ್ಟಿ ಪಡೆಯಬಹುದು’ ಎಂದು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.