ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆಗೆ ಕಾರಣರಾದ ಆರೋಪಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಾಜಿ ಪ್ರಧಾನಿ ದೇವೇಗೌಡ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ಬೆಂಗಳೂರಿನಲ್ಲಿನ ಗಲಭೆ ಪ್ರಕರಣ ತೀವ್ರ ಖಂಡನೀಯ. ಸಮಾಜದ ಸ್ವಾಸ್ಥ್ಯ ಕದಡುವುದರಿಂದ ಯಾರಿಗೂ ಉಪಯೋಗವಿಲ್ಲ,ಎಲ್ಲರಿಗೂ ನಷ್ಟ. ಪ್ರಚೋದನೆ ಮಾಡುವುದು ತಪ್ಪು, ಪ್ರಚೋದಿತರಾಗಿ ಸಾರ್ವಜನಿಕರು, ಪೊಲೀಸರು,ಪತ್ರಕರ್ತರು ಹೀಗೆ ಎಲ್ಲರ ಮೇಲೆ ಹಲ್ಲೆ ಮಾಡಿ ಗಲಾಟೆ ಮಾಡುವುದೂ ತಪ್ಪು. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ' ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.