ADVERTISEMENT

ಬೆಂ.ಗ್ರಾಮಾಂತರಕ್ಕೆ ಅರೆ ಸೇನಾಪಡೆ : ಬಿಜೆಪಿ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2024, 21:08 IST
Last Updated 17 ಏಪ್ರಿಲ್ 2024, 21:08 IST
<div class="paragraphs"><p>ಕಾಂಗ್ರೆಸ್– ಬಿಜೆಪಿ</p></div>

ಕಾಂಗ್ರೆಸ್– ಬಿಜೆಪಿ

   

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಸೇರಿ ಕೆಲವು ಕ್ಷೇತ್ರಗಳಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದ್ದು, ಅಲ್ಲಿಗೆ ಅರೆಸೇನಾಪಡೆ ನಿಯೋಜಿಸಲು ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗುವುದು ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ವಿ.ಸುನಿಲ್‌ಕುಮಾರ್‌ ಹೇಳಿದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೂಂಡಾಗಿರಿ ಹೆಚ್ಚಾಗಿದೆ. ಮತದಾರರನ್ನು ಮತ್ತು ಬಿಜೆಪಿ ಕಾರ್ಯಕರ್ತರನ್ನು ಬೆದರಿಸುವ ಕೆಲಸ ನಡೆದಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ADVERTISEMENT

‘ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆಗಳನ್ನು ಹೂಡಿ ಹೆದರಿಸುವ ತಂತ್ರವನ್ನು ಕಾಂಗ್ರೆಸ್ ಅನುಸರಿಸುತ್ತಿದೆ. ರೌಡಿಸಂ ಮೂಲಕ ಚುನಾವಣೆ ಗೆಲ್ಲಲು ಹೊರಟಿದೆ. ಆದ್ದರಿಂದ ಬೆಂಗಳೂರು ಗ್ರಾಮಾಂತರ ಮತ್ತು ನಕ್ಸಲ್‌ ಪ್ರಭಾವ ಇರುವ ಕ್ಷೇತ್ರಗಳಲ್ಲಿ ಅರೆಸೇನಾಪಡೆ ನಿಯೋಜಿಸುವ ಅಗತ್ಯವಿದೆ’ ಎಂದು ಅವರು ಪ್ರತಿಪಾದಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.