ಕೆಂಗೇರಿ: ವಿಶ್ವವಿದ್ಯಾಲಯದ ಕಾರ್ಯಕಲಾಪಗಳು ಇದೇ 31ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿವೆ ಎಂದು ಬೆಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೊರೊನಾ ರೋಗಾಣು ಪ್ರಸರಣ ತಡೆಗೆ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಅವಧಿಯಲ್ಲಿ ಆನ್‌ಲೈನ್ ಮುಖಾಂತರ ಬೋಧನೆ ಹಾಗೂ ಆನ್‌ಲೈನ್ ಮೂಲಕ ಮೌಲ್ಯಮಾಪನ ಮಾಡಲು ಅಗತ್ಯವಿರುವ ಪಠ್ಯವಸ್ತು ಅಭಿವೃದ್ಧಿ ಪಡಿಸುವುದು ಸೇರಿದಂತೆ ಅಗತ್ಯ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗುವಂತೆ ಬೋಧಕ ಸಿಬ್ಬಂದಿಗೆ ಸೂಚಿಸಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.