ಬೆಂಗಳೂರು ವಿಶ್ವವಿದ್ಯಾಲಯ
ಬೆಂಗಳೂರು: ತನ್ನ ಅಧೀನದಲ್ಲಿರುವ ಯೂನಿವರ್ಸಿಟಿ ಕಾನೂನು ಕಾಲೇಜನ್ನು ಹುಬ್ಬಳ್ಳಿಯಲ್ಲಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ಹಸ್ತಾಂತರಿಸುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವವನ್ನು ತಿರಸ್ಕರಿಸಲು ಬೆಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ.
1976ರಿಂದಲೂ ಬೆಂಗಳೂರು ವಿಶ್ವವಿದ್ಯಾಲಯದ ಘಟಕ ಕಾಲೇಜು ಸ್ಥಾನ ಪಡೆದಿರುವ ಯೂನಿವರ್ಸಿಟಿ ಕಾನೂನು ಕಾಲೇಜನ್ನು ಬಿಟ್ಟುಕೊಡದಿರಲು ಈಚೆಗೆ ನಡೆದ ಸಿಂಡಿಕೇಟ್ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಈ ನಿರ್ಣಯವನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿ ಎಸ್.ಎಂ. ಜಯಕರ ಹೇಳಿದರು.
1948ರಲ್ಲಿ ಸ್ಥಾಪಿತವಾಗಿದ್ದ ಯೂನಿವರ್ಸಿಟಿ ಕಾನೂನು ಕಾಲೇಜನ್ನು 1976ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ವರ್ಗಾಯಿಸಲಾಗಿತ್ತು. ಐದು ವರ್ಷಗಳ ಎಲ್‌ಎಲ್‌ಬಿ, ಸ್ನಾತಕೋತ್ತರ ಪದವಿ ಕೋರ್ಸ್‌ಗಳು ಲಭ್ಯವಿವೆ. ಕಾನೂನು ವಿಷಯಗಳಲ್ಲಿ ಪಿಎಚ್.ಡಿಗೂ ಇಲ್ಲಿ ಅವಕಾಶವಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್. ಬಂಗಾರಪ್ಪ, ಎಂ. ವೀರಪ್ಪ ಮೊಯ್ಲಿ, ಎಸ್.ಎಂ. ಕೃಷ್ಣ ಅವರು ಈ ಕಾಲೇಜಿನ ವಿದ್ಯಾರ್ಥಿಗಳು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.