ರಾಜ್ಯದ ರಾಜಧಾನಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರು ನಡುವಿನ ರಸ್ತೆ ಪ್ರಯಾಣವನ್ನು ಸುಗಮವಾಗಿಸಲು ದಶಪಥ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ₹ 7,400 ಕೋಟಿ ವೆಚ್ಚದ ಕಾಮಗಾರಿ ಸಮರೋಪಾದಿಯಲ್ಲಿ ನಡೆಯುತ್ತಿದೆ. ಒಟ್ಟು 118 ಕಿ.ಮೀ. ಉದ್ದದ ರಸ್ತೆ ಇದಾಗಿದೆ. ಕಾಮಗಾರಿಯನ್ನು ಎರಡು ಹಂತಗಳಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, 2022ರ ಸೆಪ್ಟೆಂಬರ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.