ADVERTISEMENT

ಮೀಸಲಾತಿ ರದ್ದತಿ ಹೇಳಿಕೆ: ತುಕಾರಾಂ ರಾಜೀನಾಮೆಗೆ ಬಿಜೆಪಿಯ ಬಂಗಾರು ಹನುಮಂತು ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2024, 11:31 IST
Last Updated 13 ಸೆಪ್ಟೆಂಬರ್ 2024, 11:31 IST
<div class="paragraphs"><p> ಬಿಜೆಪಿ ಎಸ್ಟಿ ಮೋರ್ಚಾದ ರಾಜ್ಯಧ್ಯಕ್ಷ ಬಂಗಾರು ಹನುಮಂತು</p></div>

ಬಿಜೆಪಿ ಎಸ್ಟಿ ಮೋರ್ಚಾದ ರಾಜ್ಯಧ್ಯಕ್ಷ ಬಂಗಾರು ಹನುಮಂತು

   

ಬೆಂಗಳೂರು: ಬಳ್ಳಾರಿ ಸಂಸದ ತುಕರಾಂ ಅವರಿಗೆ ಸಮಾಜದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ, ಸಮಾಜದ ಬಗ್ಗೆ ನಂಬಿಕೆ, ಗೌರವ ಇದ್ದರೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಅವರು ಆಗ್ರಹಿಸಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತುಕರಾಂ ರಾಜೀನಾಮೆಗೆ ಆಗ್ರಹಿಸಿ ಮತ್ತು ರಾಹುಲ್ ಗಾಂಧಿಯವರ ಮೀಸಲಾತಿ ರದ್ದತಿ ಕುರಿತ ಹೇಳಿಕೆಯನ್ನು ಖಂಡಿಸಿ ಮುಂದಿನ ಮಂಗಳವಾರ ಬಿಜೆಪಿ ಎಸ್.ಟಿ. ಮೋರ್ಚಾ ವತಿಯಿಂದ ಸಂಡೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳುತ್ತೇವೆ ಎಂದು ತಿಳಿಸಿದರು.

ADVERTISEMENT

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅವ್ಯವಹಾರ ನಡೆದಿದ್ದು, ಆ ಹಣವನ್ನು ಪ್ರತಿ ಬೂತಿಗೆ ₹25 ಸಾವಿರದಂತೆ ಹಂಚಿದ್ದಾರೆ. ಪ್ರತಿ ಮತಕ್ಕೆ ₹200 ಹಂಚಲಾಗಿದೆ ಎಂದು ಆರೋಪಿಸಿದರು.

‘ನಿಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿಯವರಿಗೆ ಬಳ್ಳಾರಿ ಮೇಲೆ ಎಲ್ಲಿಲ್ಲದ ಪ್ರೀತಿ. ಒಂದೆಡೆ ಅದು ಗಣಿಗಾರಿಕೆ ಪ್ರದೇಶ; ಇನ್ನೊಂದೆಡೆ ಅವರ ತಾಯಿ ಬಳ್ಳಾರಿಯಿಂದ ಸ್ಪರ್ಧಿಸಿದ್ದರು. ಅದೇ ನಂಟಿನ ಕಾರಣಕ್ಕೆ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯನವರು ನಾಗೇಂದ್ರರ ಮೇಲೆ ಒತ್ತಡ ಹಾಕಿ ವಾಲ್ಮೀಕಿ ನಿಗಮದ ಹಣವನ್ನು ಲೂಟಿ ಮಾಡಿಸಿದ್ದರು. ಆ ದುಡ್ಡನ್ನು ಚುನಾವಣೆಗೆ ಬಳಸಿಕೊಂಡಿದ್ದರು’ ಎಂದು ಆರೋಪಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.