ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ಎಲ್ಲ ವಿಭಾಗಗಳಲ್ಲಿ ಹೊಸ ನೇಮಕಾತಿ ಮಾಡಿಕೊಳ್ಳಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾರ್ಚ್ 24ರಿಂದ 25ರವರೆಗೆ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ತಿಳಿಸಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೂನಿಯನ್ ಸಂಚಾಲಕ ಗಿರಿರಾಜ, ‘ಬ್ಯಾಂಕಿಂಗ್ ಉದ್ಯಮದಲ್ಲಿ ವಾರದ ಐದು ದಿನಗಳನ್ನು ಮಾತ್ರ ಕೆಲಸದ ದಿನಗಳೆಂದು ಪರಿಗಣಿಸಬೇಕು. ಬ್ಯಾಂಕ್‌ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಮೇಲೆ ಆಗುವ ಹಲ್ಲೆಗಳನ್ನು ನಿಯಂತ್ರಿಸಿ, ಸಿಬ್ಬಂದಿಗೆ ರಕ್ಷಣೆ ನೀಡಬೇಕು. ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.