ADVERTISEMENT

ಬ್ಯಾಂಕ್‌ ವಂಚನೆ ಪ್ರಕರಣ: ₹ 100 ಕೋಟಿ ಮೌಲ್ಯದ ಸ್ಥಿರಾಸ್ತಿ ಪತ್ತೆ

​ಪ್ರಜಾವಾಣಿ ವಾರ್ತೆ
Published 7 ಜೂನ್ 2023, 13:28 IST
Last Updated 7 ಜೂನ್ 2023, 13:28 IST
ಬ್ಯಾಂಕ್‌ ವಂಚನೆ–ಪ್ರಾತಿನಿಧಿಕ ಚಿತ್ರ
ಬ್ಯಾಂಕ್‌ ವಂಚನೆ–ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಬ್ಯಾಂಕ್‌ ವಂಚನೆ ಪ್ರಕರಣದಲ್ಲಿ ಭಾರತ್‌ ಇನ್ಫ್ರಾ ಎಕ್ಸ್‌ಪೋರ್ಟ್ಸ್‌ ಅಂಡ್‌ ಇಂಪೋರ್ಟ್ಸ್‌ ಲಿಮಿಟೆಡ್‌ನ ಬೆಂಗಳೂರು ಹಾಗೂ ದಾವಣಗೆರೆಯ ಕಚೇರಿಗಳಲ್ಲಿ ಸೋಮವಾರ ಶೋಧ ನಡೆಸಿರುವ ಜಾರಿ ನಿರ್ದೇಶನಾಲಯ (ಇ.ಡಿ), ₹ 100 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಪತ್ತೆಮಾಡಿದೆ.

ಬ್ಯಾಂಕ್‌ಗಳಿಂದ ಸಾಲ ಪಡೆದು ವಂಚಿಸಿರುವ ಆರೋಪದಡಿ ಭಾರತ್‌ ಇನ್ಫ್ರಾ ಎಕ್ಸ್‌ಪೋರ್ಟ್ಸ್‌ ಅಂಡ್‌ ಇಂಪೋರ್ಟ್ಸ್‌ ಲಿಮಿಟೆಡ್‌ ವಿರುದ್ಧ ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಇ.ಡಿ, ತನಿಖೆ ನಡೆಸುತ್ತಿದೆ. ಬೆಂಗಳೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಈ ಕಂಪನಿಗೆ ಸಂಬಂಧಿಸಿದ ಏಳು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಇ.ಡಿ ನಿರ್ದೇಶಕರು ತಿಳಿಸಿದ್ದಾರೆ.

ಕಂಪನಿಯು ₹ 100 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಹೊಂದಿರುವುದು ಪತ್ತೆಯಾಗಿದೆ. ₹ 14.5 ಲಕ್ಷ ನಗದನ್ನೂ ವಶಪಡಿಸಿಕೊಳ್ಳಲಾಗಿದೆ. ಅಕ್ರಮಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳು, ಡಿಜಿಟಲ್‌ ಸಾಕ್ಷ್ಯಗಳು ಮತ್ತು ಬ್ಯಾಂಕ್‌ ಖಾತೆಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ತನಿಖಾ ತಂಡ ವಶಪಡಿಸಿಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.