ADVERTISEMENT

ಅಸ್ವಸ್ಥಗೊಂಡಿದ್ದ ಬರಗೂರು ಚೇತರಿಕೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2023, 18:39 IST
Last Updated 29 ಜನವರಿ 2023, 18:39 IST
ಬರಗೂರು ರಾಮಚಂದ್ರಪ್ಪ
ಬರಗೂರು ರಾಮಚಂದ್ರಪ್ಪ   

ಹರಿಹರ (ದಾವಣಗೆರೆ ಜಿಲ್ಲೆ): ಬಂಡಾಯ ಸಾಹಿತ್ಯ ಸಂಘಟನೆ ಭಾನುವಾರ ನಗರದಲ್ಲಿ ಆಯೋಜಿಸಿದ್ದ ವಿಚಾರ ಸಂಕಿರಣ ಮತ್ತು ಕವಿಗೋಷ್ಠಿಯಲ್ಲಿ ಭಾಗವಹಿಸಿದ್ದ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಕಾರ್ಯಕ್ರಮದ ನಂತರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಅಸ್ವಸ್ಥಗೊಂಡು ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದ್ದು, ಚೇತರಿಸಿಕೊಂಡಿದ್ದಾರೆ.

ಯಾವುದೇ ಗಂಭೀರ ಆರೋಗ್ಯ ಸಮಸ್ಯೆಗಳಿಲ್ಲ ಎಂದು ವೈದ್ಯರು ತಿಳಿಸಿದ್ದರಿಂದ ಅವರು ಬಳಿಕ ಬೆಂಗಳೂರಿಗೆ ತೆರಳಿದರು.

‘ಮಧುಮೇಹ, ರಕ್ತದೊತ್ತಡದ ಪರೀಕ್ಷೆ ನಡೆಸಿದ ವೈದ್ಯರು ಯಾವುದೇ ಸಮಸ್ಯೆ ಇಲ್ಲ ಎಂದಿದ್ದಾರೆ. ಇದೇ ಮೊದಲ ಬಾರಿಗೆ ಹೀಗಾಗಿದೆ. ನಿರಂತರ ಪ್ರಯಾಣದ ಆಯಾಸದಿಂದಾಗಿ ಆರೋಗ್ಯದಲ್ಲಿ ಏರುಪೇರಾಗಿರುವ ಸಾಧ್ಯತೆ ಇದೆ. ’ ಎಂದು ಬರಗೂರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.