ADVERTISEMENT

ಸುಧಾರಾಣಿ, ಬಾಬು, ಬಸವರಾಜ ಕಲ್ಗುಡಿ, ಕರೀಗೌಡ ಅವರಿಗೆ ಬರಗೂರು ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2024, 16:13 IST
Last Updated 18 ಡಿಸೆಂಬರ್ 2024, 16:13 IST
<div class="paragraphs"><p>ಸುಧಾರಾಣಿ, ರಾಜೇಂದ್ರ ಸಿಂಗ್ ಬಾಬು, ಬಸವರಾಜ ಕಲ್ಗುಡಿ,&nbsp;ಕರೀಗೌಡ ಬೀಚನಹಳ್ಳಿ</p></div>

ಸುಧಾರಾಣಿ, ರಾಜೇಂದ್ರ ಸಿಂಗ್ ಬಾಬು, ಬಸವರಾಜ ಕಲ್ಗುಡಿ, ಕರೀಗೌಡ ಬೀಚನಹಳ್ಳಿ

   

ಬೆಂಗಳೂರು: ನಾಡೋಜ ಡಾ. ಬರಗೂರು ಪ್ರತಿಷ್ಠಾನ ನೀಡುವ ‘ಬರಗೂರು ಪ್ರಶಸ್ತಿ’ಗೆ ವಿಮರ್ಶಕ ಬಸವರಾಜ ಕಲ್ಗುಡಿ, ನಟಿ ಸುಧಾರಾಣಿ ಸೇರಿ ನಾಲ್ವರು ಆಯ್ಕೆಯಾಗಿದ್ದಾರೆ.

ಪ್ರತಿಷ್ಠಾನವು 2023 ಮತ್ತು 2024ನೇ ಸಾಲಿನ ಪ್ರಶಸ್ತಿ ಪ್ರಕಟಿಸಿದೆ. ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಹಾಗೂ ಸಾಹಿತಿ ಕರೀಗೌಡ ಬೀಚನಹಳ್ಳಿ ಅವರೂ ಆಯ್ಕೆಯಾಗಿದ್ದಾರೆ. ಸೃಜನಶೀಲ ಕ್ಷೇತ್ರಗಳಾದ ಸಾಹಿತ್ಯ ಮತ್ತು ಸಿನಿಮಾದಲ್ಲಿ ಸಾಧನೆ ಮಾಡಿದ ತಲಾ ಒಬ್ಬರಿಗೆ ಪ್ರತಿ ವರ್ಷ ಈ ಪ್ರಶಸ್ತಿ ನೀಡಲಾಗುತ್ತಿದೆ. 

ADVERTISEMENT

ಪ್ರಶಸ್ತಿ ಪ್ರದಾನ ಸಮಾರಂಭವು ಇದೇ 23ರಂದು ಸಂಜೆ 5 ಗಂಟೆಗೆ ಇಲ್ಲಿನ ಸರ್ಕಾರಿ ಕಲಾ ಕಾಲೇಜಿನ ಬಾಪೂಜಿ ಸಭಾಂಗಣದಲ್ಲಿ ನಡೆಯಲಿದೆ. ಸಾಹಿತಿ ಹಂ.ಪ. ನಾಗರಾಜಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಎ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.