ವಿಜಯಪುರ: ‘ನನ್ನ ಮೊಬೈಲ್ ಫೋನ್ ಕರೆನ್ಸಿ ಖಾಲಿಯಾಗಿದೆ, ಯಾರ ಕರೆಯೂ ಬಂದಿಲ್ಲ’ ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮುಖ್ಯಮಂತ್ರಿಯಿಂದ ಕರೆ ಬಂದಿಲ್ಲ, ಸಂಪುಟದಲ್ಲಿ ಸಚಿವ ಸ್ಥಾನ ಸಿಗುತ್ತಿಲ್ಲ ಎಂದು ಪರೋಕ್ಷವಾಗಿ ನಿರಾಸೆ ವ್ಯಕ್ತಪಡಿಸಿದರು.
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನಿಮಗೆ ಮುಖ್ಯಮಂತ್ರಿಯಿಂದ ಕರೆ ಬಂದಿದೆಯಾ? ಬೆಂಗಳೂರಿಗೆ ಹೋಗುತ್ತಿದ್ದೀರಾ? ಎಂಬ ಪತ್ರಕರ್ತರ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದ ಅವರು, ‘ಬೆಂಗಳೂರಿನಲ್ಲಿ ನನಗೇನೂ ಕೆಲಸ ಇಲ್ಲ, ಅಲ್ಲಿಗೆ ನಾನು ಹೋಗುತ್ತಿಲ್ಲ’ ಎಂದು ಹೇಳಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.