ಬಸವಜಯ ಮೃತ್ಯುಂಜಯ ಸ್ವಾಮೀಜಿ
ಧಾರವಾಡ: ‘ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸುವ ನಿರ್ಣಯ ಹಿಂಪಡೆಯಬೇಕು. ಇಲ್ಲದಿದ್ದರೆ, ಬಿಜೆಪಿಯಲ್ಲಿನ ಲಿಂಗಾಯತ ಪಂಚಮಸಾಲಿ ಸಮುದಾಯದವರು ಎಲ್ಲರೂ ಪಕ್ಷಕ್ಕೆ ರಾಜೀನಾಮೆ ನೀಡುವಂತೆ ಕರೆ ನೀಡಲಾಗುವುದು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
‘ಪಕ್ಷದಲ್ಲಿ ಕುಟುಂಬ ರಾಜಕಾರಣ ಮತ್ರು ಭ್ರಷ್ಟಾಚಾರ ಮಾಡವಂತಹ ವ್ಯಕ್ತಿಯ ವಿರುದ್ಧ ಮಾತನಾಡುವುದು ತಪ್ಪೇ? ಬಿ.ಎಸ್.ಯಡಿಯೂರಪ್ಪ ಅವರು ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಕೊಟ್ಟ ಮಾತಿನಂತೆ ಮೀಸಲಾತಿ ಕಲ್ಪಿಸಲಿಲ್ಲ ಎಂದು ಸಮುದಾಯದವರು ಅಸಮಾಧಾನಗೊಂಡಿದ್ದರು. ಯತ್ನಾಳ ಅವರು ನಾಯಕನಾಗಿ ಬೆಳೆಯುವುದನ್ನು ಸಹಿಸದ ಯಡಿಯೂರಪ್ಪ ಅವರ ಮಾತನ್ನು ಕೇಳಿ ಉಚ್ಚಾಟಿಲಾಗಿದೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
‘ಯತ್ನಾಳ ಅವರನ್ನು ಉಚ್ಚಾಟಿಸಿರುವುದು ಬಿಜೆಪಿಗೆ ಹಿನ್ನಡೆ ಆಗಲಿದೆ. ಅವರು ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ.ಪಕ್ಷದ ಹೊರಗಿದ್ದು ಹೋರಾಟ ಮಾಡುವ ಶಕ್ತಿ ಅವರಿಗಿದೆ. ಪಂಚಮ ಸಾಲಿ ಸಮುದಾಯ ಅವರ ಜತೆಗಿದೆ. ಅವರು ಧೃತಿಗಡಬೇಕಿಲ್ಲ. ಅವರು ತೆಗೆದುಕೊಳ್ಳುವ ತೀರ್ಮಾನವನ್ನು ಬೆಂಬಲಿಸುತ್ತೇವೆ’ ಎಂದರು
ಸಭೆ ಇಂದು: ಮಾರ್ಚ್ 27ರಂದು ಮಧ್ಯಾಹ್ನ 1 ಗಂಟೆಗೆ ಬೆಳಗಾವಿಯ ಗಾಂಧೀ ಭವನದಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯದ ಪದಾಧಿಕಾರಿಗಳು ತುರ್ತು ಸಭೆ ನಡೆಸಲಾಗುವುದು. ಹೋರಾಟದ ಕುರಿತು ಸಭೆಯಲ್ಲಿ ನಿರ್ಧರಿಸಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.