‘ಹೋರಾಟಗಾರರನ್ನು ಮಾತುಕತೆಗೆ ಆಹ್ವಾನಿಸಿದರೂ ಬಂದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ಶುದ್ಧ ಸುಳ್ಳು. ನಾವು ಇಡೀ ದಿನ ಕಾಯ್ದರೂ ಅವರು ಸ್ಥಳಕ್ಕೆ ಬರಲಿಲ್ಲ. ನಾವೇ ಭೇಟಿಯಾಗಲು ಹೊರಟರೆ ಲಾಠಿಚಾರ್ಜ್ ಮಾಡಿಸಿದ್ದಾರೆ. ಸಿದ್ದರಾಮಯ್ಯ ಪರವಾಗಿ ಬಂದಿದ್ದ ನಾಲ್ವರು ಸಚಿವರೂ ನಮ್ಮನ್ನು ಮಾತುಕತೆಗೆ ಆಹ್ವಾನಿಸಿಲ್ಲ. ಇದು ಲಿಂಗಾಯತ ವಿರೋಧಿ ಸರ್ಕಾರ. ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಂಗಾಯತ ವಿರೋಧಿ’ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಕಿಡಿಕಾರಿದರು. ಬೆಳಗಾವಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಆಗದಿದ್ದರೆ; ಈ ಹಿಂದೆ ಬಿಜೆಪಿ ಸರ್ಕಾರ ನೀಡಿದ್ದ 2ಡಿ ಮೀಸಲಾತಿಯನ್ನಾದರೂ ಸದ್ಯಕ್ಕೆ ಜಾರಿಗೆ ಮಾಡಬೇಕು’ ಎಂದೂ ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.