ADVERTISEMENT

ಸಂಸತ್‌ನಲ್ಲಿ ಬಸವ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2025, 16:06 IST
Last Updated 30 ಏಪ್ರಿಲ್ 2025, 16:06 IST
ಬಸವೇಶ್ವರ ಭಾವಚಿತ್ರಕ್ಕೆ ಅತಿಥಿಗಳು ಪುಷ್ಪನಮನ ಸಲ್ಲಿಸಿದರು. 
ಬಸವೇಶ್ವರ ಭಾವಚಿತ್ರಕ್ಕೆ ಅತಿಥಿಗಳು ಪುಷ್ಪನಮನ ಸಲ್ಲಿಸಿದರು.     

ನವದೆಹಲಿ: ರೈಲ್ವೆ ಇಲಾಖೆಯ ಆಶ್ರಯದಲ್ಲಿ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಬುಧವಾರ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣ, ‘ಜಾತಿ ರಹಿತ ಮತ್ತು ವರ್ಗರಹಿತ ಸಮಾಜದ ಕಲ್ಪನೆಯನ್ನು ಜಗತ್ತಿಗೆ ತೋರಿಸಿದವರು ಬಸವಣ್ಣನವರು. ಕಾಯಕವೇ ಕೈಲಾಸ ಎಂಬ ತತ್ವದೊಂದಿಗೆ ಆರೋಗ್ಯವಂತ ಸಮಾಜಕ್ಕೆ ಅಡಿಪಾಯ ಹಾಕಿದವರು ಬಸವೇಶ್ವರರು’ ಎಂದರು. 

ಬಸವಣ್ಣನವರ ಸಾರಥ್ಯದಲ್ಲಿ ನಡೆದ ಸುಧಾರಣೆಯ ಪ್ರಯತ್ನ ಒಂದು ಸಾಮಾಜಿಕ ಚಳವಳಿಯಾಗಿ ರೂಪುಗೊಂಡಿತ್ತು. ಸಾಮಾನ್ಯ ಬದುಕಿನ ಎಲ್ಲಾ ಸ್ತರಗಳು ಆ ಚಳುವಳಿಯ ಒಂದು ಭಾಗವಾದದ್ದು ಶರಣರ ಪೂರ್ಣ ದೃಷ್ಟಿಯ ಸಂಕೇತ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.

ADVERTISEMENT

ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ಕಾರ್ಮಿಕ ಮತ್ತು ಉದ್ಯೋಗ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ರವನೀತ ಸಿಂಗ್, ರಾಜಭೂಷಣ್ ಚೌಧರಿ, ಸಂಸದರಾದ ಪಿ.ಸಿ.ಗದ್ದಿಗೌಡರ, ತೇಜಸ್ವಿ ಸೂರ್ಯ, ಈರಣ್ಣ ಕಡಾಡಿ, ಮಾಜಿ ಸಂಸದರಾದ ಡಾ. ಉಮೇಶ್ ಜಾಧವ, ಅಣ್ಣಾ ಸಾಹೇಬ್‌ ಜೊಲ್ಲೆ, ಶಾಸಕ ಬಿ. ಪಿ. ಹರೀಶ್, ಬಸವ ಮೃತ್ಯುಂಜಯ ಸ್ವಾಮೀಜಿ, ಬಸವ ಪ್ರಕಾಶ ಸ್ವಾಮೀಜಿ, ಬಸವಕುಮಾರ ಸ್ವಾಮೀಜಿ ಭಾಗವಹಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.