ಮೈಸೂರು: ನಗರದ ಹೊಸಮಠದ ಚಿದಾನಂದ ಸ್ವಾಮೀಜಿ ಅವರು ಬಸವೇಶ್ವರ ಪ್ರತಿಮೆಗೆ ಮಾಸ್ಕ್ ತೊಡಿಸಿ ಪುಷ್ಪಾರ್ಚನೆ ಮಾಡುವುದರ ಮೂಲಕ ಬಸವ ಜಯಂತಿ ಆಚರಿಸಿದರು.
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ, ಮೇ 10ರಿಂದ ಮೇ 24ರವರೆಗೆ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಲಾಕ್‌ಡೌನ್ ನಡುವೆಯೂ ಹೊಸಮಠದಲ್ಲಿ ಬಸವಣ್ಣನ ಜಯಂತಿ ಆಚರಿಸಿ, ಪ್ರತಿಮೆಗೆ ಮಾಸ್ಕ್ ಹಾಕುವ ಮೂಲಕ ಕೊರೊನಾ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.