ADVERTISEMENT

ಕನ್ನಡದಲ್ಲಿ ಟ್ವೀಟ್: ಬಸವ ಜಯಂತಿ ಶುಭಾಶಯ ಕೋರಿದ ಮೋದಿ, ರಾಹುಲ್ ಗಾಂಧಿ

​ಪ್ರಜಾವಾಣಿ ವಾರ್ತೆ
Published 3 ಮೇ 2022, 6:09 IST
Last Updated 3 ಮೇ 2022, 6:09 IST
   

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕನ್ನಡದಲ್ಲಿ ಟ್ವೀಟ್ ಮಾಡುವ ಬಸವ ಜಯಂತಿಯ ಶುಭಾಶಯ ಕೋರಿದ್ದಾರೆ.

ಬಸವ ಜಯಂತಿಯ ಈ ಶುಭಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ಗೌರವ ನಮನಗಳು. ಬಸವಣ್ಣನವರ ಚಿಂತನೆ, ಬೋಧನೆ ಹಾಗು ತತ್ವಾದರ್ಶಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರಿಗೆ ಶಕ್ತಿ ತುಂಬುತ್ತಿದೆ. ಜಗಜ್ಯೋತಿ ಬಸವೇಶ್ವರರ ಕುರಿತು 2020ರಲ್ಲಿ ನಾನು ಮಾಡಿದ ಭಾಷಣವನ್ನು ಹಂಚಿಕೊಳ್ಳುತ್ತಿರುವೆ ಎಂದು ಮೋದಿ ವಿಡಿಯೊ ಸಹಿತ ಟ್ವೀಟ್ ಮಾಡಿದ್ದಾರೆ.

ಸರ್ವರಿಗೂ ಕಾಯಕಯೋಗಿ ಬಸವಣ್ಣನವರ ಜಯಂತಿಯ ಶುಭಾಶಯಗಳು. 12 ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ಅನುಭವ ಮಂಟಪದ ಮೂಲಕ ಜಗತ್ತಿಗೆ ಪ್ರಜಾಪ್ರಭುತ್ವದ ಕಲ್ಪನೆ ನೀಡಿದ ವಿಶ್ವಗುರು, ಮಹಾ ಮಾನವತಾವಾದಿ ಅಣ್ಣ ಬಸವಣ್ಣನವರ ಬದುಕು, ತತ್ವ, ವಚನ ಸಂದೇಶ ನಮ್ಮೆಲ್ಲರ ಜೀವನಕ್ಕೆ ಪ್ರೇರಣೆ ಆಗಲಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.