ADVERTISEMENT

ಬಸವ ಕಲ್ಯಾಣ ಉಪ ಚುನಾವಣೆ: ವಿಜಯೇಂದ್ರ ಹೆಸರು ಪ್ರಸ್ತಾಪ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2021, 6:58 IST
Last Updated 20 ಮಾರ್ಚ್ 2021, 6:58 IST
ಮುಖ್ಯಮಂತ್ರಿ ಯಡಿಯೂರಪ್ಪ ಮಗ ಬಿ.ವೈ. ವಿಜಯೇಂದ್ರ
ಮುಖ್ಯಮಂತ್ರಿ ಯಡಿಯೂರಪ್ಪ ಮಗ ಬಿ.ವೈ. ವಿಜಯೇಂದ್ರ   

ಬೆಂಗಳೂರು: ಉಪ ಚುನಾವಣೆ ನಡೆಯಲಿರುವ ಬಸವಕಲ್ಯಾಣ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮಗ ಬಿ.ವೈ. ವಿಜಯೇಂದ್ರ ಅವರನ್ನು ಕಣಕ್ಕೆ ಇಳಿಸುವ ಬಗ್ಗೆ ಬಿಜೆಪಿ ಪ್ರಮಖರ ಸಮಿತಿ ಸಭೆಯಲ್ಲಿ ಪ್ರಸ್ತಾಪವಾಗಿದೆ.

ಕಾಂಗ್ರೆಸ್ ತೆಕ್ಕೆಯಲ್ಲಿದ್ದ ಬಸವ ಕಲ್ಯಾಣ ಕ್ಷೇತ್ರವನ್ನು ಬಿಜೆಪಿ ವಶಕ್ಕೆ ಪಡೆಯಬೇಕಾದರೆ ಈ ಆಯ್ಕೆ ಸೂಕ್ತ ಎಂದು ಕೆಲವು ಸದಸ್ಯರು ಸಲಹೆ ನೀಡಿದರು. ಮರಾಠಾ ನಿ‌ಗಮ‌ ರಚನೆಯಿಂದ ಮರಾಠಾ ಸಮುದಾಯ ಮತ ಸೆಳೆಯಲು ಸಾಧ್ಯ. ಹಾಗೆಯೇ, ನಿರ್ಣಾಯಕವಾಗಿರುವ ಲಿಂಗಾಯತ ಮತ ಅನಾಯಾಸವಾಗಿ ದಕ್ಕುವುದರಿಂದ ವಿಜಯೇಂದ್ರ ಸ್ಪರ್ಧಿಸಿದರೆ ಒಳಿತು ಎಂಬ ಅಭಿಪ್ರಾಯ ಮೂಡಿತು. ಅಂತಿಮ ತೀರ್ಮಾನವನ್ನು ವರಿಷ್ಠರಿಗೆ ಬಿಡಲು ನಿರ್ಧರಿಲಾಯಿತು ಎಂದು ಮೂಲಗಳು ತಿಳಿಸಿವೆ.

ಶ್ರದ್ಧಾ ಶೆಟ್ಟರ್‌?
ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ದಿವಂಗತ ಸಂಸದ ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಅಥವಾ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಕಣಕ್ಕೆ ಇಳಿಸುವ ಬಗ್ಗೆ ಚರ್ಚೆ ನಡೆದಿದೆ. ಇನ್ನೂ ಕೆಲವು ಹೆಸರುಗಳು ಪ್ರಸ್ತಾಪವಾಗಿದ್ದು, ಇನ್ನೆರಡು ದಿನದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಿವರಿಷ್ಠರಿಗೆ ಶಿಫಾರಸು ಮಾಡಲು ಪ್ರಮುಖರ ಸಮಿತಿ ಸಭೆ ನಿರ್ಣಯ ಕೈಗೊಂಡಿದೆ ಎಂದು ಮೂಲಗಳು ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.