ಬೆಂಗಳೂರು: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಶುಕ್ರವಾರ ಬಿಜೆಪಿ ತೊರೆದು ಜೆಡಿಎಸ್ ಪಕ್ಷಕ್ಕೆ ಮರಳಿದರು.
ಈ ಹಿಂದೆ ಜೆಡಿಎಸ್ ಪಕ್ಷದಿಂದ ಎರಡು ಬಾರಿ ಬಸವಕಲ್ಯಾಣ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಸೇರಿದ್ದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಮನೆಯಲ್ಲೇ ಶುಕ್ರವಾರ ಪಕ್ಷ ಸೇರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.