ADVERTISEMENT

ಬೊಮ್ಮಾಯಿ–ಪವಾರ್‌ ಭೇಟಿ: ಕರ್ನಾಟಕ–ಮಹಾರಾಷ್ಟ್ರ ಜಲ ವಿವಾದ ಬಗೆಹರಿಸಲು ಚರ್ಚೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2021, 11:27 IST
Last Updated 6 ಆಗಸ್ಟ್ 2021, 11:27 IST
ಬಸವರಾಜ ಬೊಮ್ಮಾಯಿ ಮತ್ತು ಶರದ್ ಪವಾರ್
ಬಸವರಾಜ ಬೊಮ್ಮಾಯಿ ಮತ್ತು ಶರದ್ ಪವಾರ್   

ಬೆಂಗಳೂರು: ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಅವರು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಕರ್ನಾಟಕ– ಮಹಾರಾಷ್ಟ್ರ ನದಿ ನೀರು ಹಂಚಿಕೆ ವಿಷಯದ ಕುರಿತು ಸಮಾಲೋಚನೆ ನಡೆಸಿದರು.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಮಾತುಕತೆ ನಡೆಯಿತು. ಪ್ರವಾಹದ ಸಂದರ್ಭದಲ್ಲಿ ಪರಸ್ಪರ ಸಹಕಾರ ಮತ್ತು ನದಿ ನೀರಿನ ಹಂಚಿಕೆ ವಿವಾದಗಳನ್ನು ಪರಸ್ಪರ ಮಾತುಕತೆ ಮೂಲಕ ವಿವಾದ ಬಗೆಹರಿಸಿಕೊಳ್ಳಲು ಇಬ್ಬರೂ ನಾಯಕರೂ ಒಪ್ಪಿಕೊಂಡರು.

ಎರಡು ರಾಜ್ಯಗಳ ನಡುವಿನ ಅಂತರರಾಜ್ಯ ಜಲ ವಿವಾದಗಳು ಮತ್ತು ನದಿ ನೀರು ಹಂಚಿಕೆ ಕುರಿತು ವಿಸ್ತೃತ ಚರ್ಚೆಗಾಗಿ ನವದೆಹಲಿಯಲ್ಲಿ ಶೀಘ್ರವೇ ಸಭೆ ನಡೆಸಲು ಸಹಮತ ವ್ಯಕ್ತಪಡಿಸಿದರು.

ADVERTISEMENT

ಈ ಭೇಟಿಯ ಬಳಿಕ ಮಹಾರಾಷ್ಟ್ರ ಸರ್ಕಾರ ನೀರಾವರಿ ಸಚಿವ ಜಯಂತ ಪಾಟೀಲ ಅವರು ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಎರಡೂ ರಾಜ್ಯಗಳ ಜಲ ವಿಷಯಗಳಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.