ಮಂಡ್ಯ: ‘ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಾಂಗ್ರೆಸ್ ಪಕ್ಷದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಅವರು ಈ ರಾಜ್ಯದ ಗೌರವ ಕಾಪಾಡುವ ಕೆಲಸ ಮಾಡಲಿ, ಉತ್ತಮ ಆಡಳಿತ ನೀಡಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬುಧವಾರ ತಿಳಿಸಿದರು.
ಮದ್ದೂರು ತಾಲ್ಲೂಕು ಹನುಮಂತನಗರದಲ್ಲಿ ನಡೆದ ಮಾಜಿ ಸಂಸದ ಜಿ.ಮಾದೇಗೌಡರ ಪುಣ್ಯಸ್ಮರಣೆಯಲ್ಲಿ ಭಾಗಿಯಾಗಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.
‘ಕೇಂದ್ರ ಸರ್ಕಾರದಿಂದ ನಾವು ವಂಚನೆಗೆ ಒಳಗಾಗಿದ್ದೇವೆ, ಕೇಂದ್ರ ಸರ್ಕಾರದಿಂದ ಬರಬೇಕಾದ ಅನುದಾನ ಬಾರದ ಕಾರಣ ಹಲವು ಯೋಜನೆಗಳು ಜಾರಿಯಾಗಿಲ್ಲ. ಈ ಬಗ್ಗೆ ಸಂಸತ್ ಸದಸ್ಯರೂ ಧ್ವನಿ ಎತ್ತಿಲ್ಲ. ಮೇಕೆದಾಟು ಯೋಜನೆ ವಿಚಾರದಲ್ಲಿ ಕೇಂದ್ರ ಸರ್ಕಾರ ನಮಗೆ ಅನ್ಯಾಯ ಮಾಡುತ್ತಿದೆ. ನೂತನ ಮುಖ್ಯಮಂತ್ರಿಗಳು ಯೋಜನೆ ಜಾರಿ ಬಗ್ಗೆ ಗಮನ ಹರಿಸಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.