
ಅಶ್ವಿನಿ ವೈಷ್ಣವ್ ಅವರಿಗೆ ಬಸವರಾಜ ಬೊಮ್ಮಾಯಿ ಮನವಿ ಸಲ್ಲಿಸಿದರು.
ನವದೆಹಲಿ: ಗದಗ ಯಲವಿಗಿ ರೈಲು ಯೋಜನೆಯ ವಿಸ್ತೃತ ಯೋಜನಾ ವರದಿಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಕಾಮಗಾರಿ ಆರಂಭಿಸಬೇಕು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.
ಬುಧವಾರ ಇಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಅವರು, ‘ಯೋಜನೆಗೆ ಕೇಂದ್ರ ಸರ್ಕಾರ ಯೋಜನೆಗೆ ಒಪ್ಪಿಗೆ ನೀಡಿದ್ದು, ಡಿಪಿಆರ್ ಗೆ ಅನುಮತಿ ನೀಡಿ ಯೋಜನೆ ಕಾರ್ಯಾರಂಭ ಮಾಡಬೇಕು. ನಾನು ರಾಜ್ಯ ಸರ್ಕಾರಕ್ಕೆ ಭೂಸ್ವಾಧೀನ ಕೈಗೊಳ್ಳಲು ಆಗ್ರಹಿಸಿದ್ದೇನೆ. ಡಿಪಿಆರ್ ಗೆ ಒಪ್ಪಿಗೆ ನೀಡುವುದರಿಂದ ತ್ವರಿತಗತಿಯಲ್ಲಿ 2026 ರಲ್ಲಿ ಯೋಜನೆ ಕೈಗೆತ್ತಿಕೊಳ್ಳಲು ಅನುಕೂಲವಾಗಲಿದೆ‘ ಎಂದರು.
‘ಶಿವಮೊಗ್ಗ– ರಾಣೆಬೆನ್ನೂರು ರೈಲು ಯೋಜನೆಗೆ ಆದಷ್ಟು ಬೇಗ ಭೂಸ್ವಾದಿನ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಬಹಳ ವರ್ಷಗಳಿಂದ ಈ ಯೋಜನೆ ನನೆಗುದಿಗೆ ಬಿದ್ದಿದೆ. ಗದಗ– ಕುಷ್ಟಗಿ ಹೊಸ ರೈಲು ಮಾರ್ಗಕ್ಕಾಗಿ ಬೇಡಿಕೆ ಇದೆ. ನರೇಗಲ್, ಗಜೇಂದ್ರಗಢ ಮೂಲಕ ಹಾದು ಹೋಗುವ ಈ ಮಾರ್ಗಕ್ಕೆ ತಕ್ಷಣ ಸಮೀಕ್ಷೆ ನಡೆಸಲು ಸೂಚಿಸಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಬೇಕು‘ ಎಂದು ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.