ADVERTISEMENT

ಒಳ ಮೀಸಲಾತಿ | ಎಲ್ಲಾ ಸಮುದಾಯಗಳ ಜತೆ ಚರ್ಚಿಸಿ: ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2026, 16:10 IST
Last Updated 2 ಮಾರ್ಚ್ 2026, 16:10 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ‘ರಾಜ್ಯ ಸರ್ಕಾರ ಖಾಲಿ ಹುದ್ದೆಗಳಿಗೆ ನೇಮಕ ಮಾಡುವ ಸಂದರ್ಭದಲ್ಲಿ ಒಳ ಮೀಸಲಾತಿ ಪರಿಗಣನೆಗೆ ಎಲ್ಲ ಸಮುದಾಯದ ಜೊತೆ ಚರ್ಚೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ನೇಮಕ ಮಾಡಬೇಕು’ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಾಜ್ಯಪಾಲರು ಒಳ ಮೀಸಲಾತಿಗೆ ಅಂಕಿತ ಹಾಕಿ ಆದೇಶ ಮಾಡಿರುವ ಬಗ್ಗೆ ನನಗೆ ಗೊತ್ತಿಲ್ಲ. ರಾಜ್ಯ ಸರ್ಕಾರ ಭರ್ತಿ ಮಾಡಬೇಕಿರುವ ನೇಮಕಾತಿಗೆ ಯಾವ ರೀತಿ ಪಾಲನೆ ಮಾಡಬೇಕು ಎನ್ನುವ ಬಗ್ಗೆ ಸ್ಪಷ್ಟನೆ ಬೇಕಿದೆ. ಆದರೆ, ಸರ್ಕಾರ ಗೊಂದಲಕ್ಕೆ ಸಿಲುಕಿದೆ’ ಎಂದರು.

‘ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೆ ಕಾನೂನು ಮಾಡಿದೆ. ಹೀಗಾಗಿ ಎಲ್ಲ ಸಮುದಾಯದವರೂ ಒಳ ಮೀಸಲಾತಿ ಕೊಡಿ ಎಂದು ಬೇಡಿಕೆ ಇಡುತ್ತಿದ್ದಾರೆ. ಸಮಸ್ಯೆ ಸರಳೀಕರಣ ಮಾಡಬೇಕು. ಕಾನೂನು ತಜ್ಞರ ಸಲಹೆ ಪಡೆದು ಮಾಡಬೇಕು’ ಎಂದು ಸಲಹೆ ನೀಡಿದರು.

ADVERTISEMENT