ADVERTISEMENT

ಪೊಲೀಸ್‌ ಸಂಸ್ಮರಣಾ ದಿನ; ಹುತಾತ್ಮ ಪೊಲೀಸರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸಿಎಂ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಅಕ್ಟೋಬರ್ 2022, 6:51 IST
Last Updated 21 ಅಕ್ಟೋಬರ್ 2022, 6:51 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುತಾತ್ಮ ಪೊಲೀಸರ ಸ್ಮಾರಕಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುತಾತ್ಮ ಪೊಲೀಸರ ಸ್ಮಾರಕಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು.    

ಬೆಂಗಳೂರು: ರಾಜ್ಯದಾದ್ಯ‌ಂತ ಪೊಲೀಸ್‌ ಕಚೇರಿಗಳಲ್ಲಿ ಶುಕ್ರವಾರ ಪೊಲೀಸ್‌ ಸಂಸ್ಮರಣಾ ದಿನ ಆಚರಿಸಲಾಗುತ್ತಿದೆ.

ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುತಾತ್ಮ ಪೊಲೀಸರ ಸ್ಮಾರಕಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಇದೇ ವೇಳೆ ಪೊಲೀಸ್‌ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಗೌರವ ವಂದನೆ ಸಲ್ಲಿಸಿದರು.

‘ಸುರಕ್ಷಿತ ಸಮಾಜಕ್ಕಾಗಿ, ನಾಡಿನ ಕಾನೂನು ಸುವ್ಯವಸ್ಥೆಯ ಕರ್ತವ್ಯವನ್ನು ನಿರ್ವಹಿಸುವಾಗ ತಮ್ಮ ಪ್ರಾಣವನ್ನು ಅರ್ಪಿಸಿದ ನಮ್ಮ ಹುತಾತ್ಮ ವೀರ ಪೊಲೀಸ್ ಸಿಬ್ಬಂದಿಗಳಿಗೆ ಗೌರವಪೂರ್ವಕ ನಮನಗಳು’ ಎಂದು ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ADVERTISEMENT

ಹುಬ್ಬಳ್ಳಿ -ಧಾರವಾಡ, ಕೊಡಗು, ಚಾಮರಾಜನಗರ, ಬೀದರ್‌ ಜಿಲ್ಲೆಗಳಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಆಚರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.