
ಪ್ರಜಾವಾಣಿ ವಾರ್ತೆ
ಹಾವೇರಿ: ‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ದೇವರಾಜ ಅರಸು ಅವರ ದಾಖಲೆ ಮುರಿದಿದ್ದಾರೆ. ಏಳು ವರ್ಷ ಅಧಿಕಾರ ಅನುಭವಿಸಿದ್ದಾರೆ. ಅನ್ಯಾಯ ಆಗಿದೆ ಎಂದರೆ ಏನು ಅರ್ಥ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.
‘ರಾಜಕೀಯವಾಗಿ ನನಗೆ ಅನ್ಯಾಯ ಆಗುತ್ತಿದೆ’ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಷಯಕ್ಕೆ ಹೀಗೆ ಪ್ರತಿಕ್ರಿಯಿಸಿದರು.
‘ಸಿದ್ದರಾಮಯ್ಯ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಹಿಂದುಳಿದ ವರ್ಗದವರಿಗೆ, ಪರಿಶಿಷ್ಟ ವರ್ಗದವರಿಗೆ ಏನು ಮಾಡಿದ್ದಾರೆ ಎನ್ನುವುದನ್ನು ಲೆಕ್ಕ ಕೊಡಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.