ADVERTISEMENT

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ನಿರ್ಣಯ: ಬಸವರಾಜ ಬೊಮ್ಮಾಯಿ ಖಂಡನೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2022, 19:31 IST
Last Updated 21 ಮಾರ್ಚ್ 2022, 19:31 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ತಮಿಳುನಾಡು ವಿಧಾನಸಭೆ ಸೋಮವಾರ ಮೇಕೆದಾಟು ಯೋಜನೆ ವಿರುದ್ಧ ಕೈಗೊಂಡಿರುವ ನಿರ್ಣಯ ಕಾನೂನು ಬಾಹಿರವಾಗಿದ್ದು, ಇದನ್ನು ಕರ್ನಾಟಕ ಖಂಡಿಸುತ್ತದೆ ಮತ್ತು ಮೇಕೆದಾಟು ಯೋಜನೆ ನಿರ್ಮಾಣಕ್ಕೆ ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಅವರು, ಒಂದು ರಾಜ್ಯ ಇನ್ನೊಂದು ರಾಜ್ಯದ ಹಕ್ಕನ್ನು ಆಕ್ರಮಿಸಿಕೊಳ್ಳುವಂತಹ ಜನ ವಿರೋಧಿ ನಿರ್ಣಯ ಇದಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ತಮಿಳುನಾಡಿಗೆ ನಂಬಿಕೆ ಇಲ್ಲದ ನಿರ್ಣಯ ಇದಾಗಿದೆ ಎಂದಿದ್ದಾರೆ.

ಮೇಕೆದಾಟು ಯೋಜನೆ ರಾಜ್ಯದಲ್ಲಿ ಹುಟ್ಟುವ ಕಾವೇರಿ ನದಿಗೆ ಸಂಬಂಧಿಸಿದ್ದಾಗಿದೆ. ಕಾವೇರಿ ನ್ಯಾಯಾಧಿಕರಣ ಅನ್ವಯ ತಮಿಳುನಾಡಿಗೆ 177.25 ಟಿಎಂಸಿ ನೀರನ್ನು ಕೊಟ್ಟ ನಂತರ ಉಳಿದ ನೀರಿನ ಮೇಲೆ ಕರ್ನಾಟಕದ ಹಕ್ಕು ಇದೆ. ತಮಿಳುನಾಡಿನ ಈ ರಾಜಕೀಯ ನಿರ್ಧಾರವನ್ನು ಲೆಕ್ಕಿಸದೇ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಲು ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.