ಬೆಂಗಳೂರು: ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನು ವಜಾಗೊಳಿಸುವ ಮೂಲಕ ಕ್ರಾಂತಿ ಆರಂಭವಾಗಿದೆ ಎಂದು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜಣ್ಣ ಅವರನ್ನು ಸಂಪುದಿಂದ ಕೈಬಿಟ್ಟಿರುವ ಬಗ್ಗೆ ಎಕ್ಸ್ ಪೋಸ್ಟ್‌ನಲ್ಲಿ ಅವರು ಬರೆದುಕೊಂಡಿದ್ದಾರೆ. ಇದೊಂದು ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಾದ ಹಿನ್ನಡೆ, ಎಚ್ಚರಿಕೆ ಕರೆಗಂಟೆ ಎಂದು ಹೇಳಿದ್ದಾರೆ.
‘ಕಾಂಗ್ರೆಸ್ ನಲ್ಲಿ ಸತ್ಯಕ್ಕೆ ಸ್ಥಳವಿಲ್ಲ. ಕಾಂಗ್ರೆಸ್ ನಲ್ಲಿ ಸತ್ಯ ಹೇಳುವವರಿಗೂ ಸ್ಥಳವಿಲ್ಲ. ಕಾಂಗ್ರೆಸ್‌ನ ಮತಕ್ಕೆ ಓಲೈಕೆ ರಾಜಕಾರಣದ ಜೊತೆಗೆ ಆಂತರಿಕವಾಗಿ ಸಂವಿಧಾನದ ವಿರೋಧ ನಡೆದರೂ ಹೈಕಮಾಂಡ್ ವಿರುದ್ದ ಧ್ವನಿ ಎತ್ತುವ ಸ್ವಾತಂತ್ರ್ಯಇಲ್ಲ. ಗುಲಾಮರಂತೆ ನಡೆಸಿಕೊಳ್ಳುವ ಮನಸ್ಥಿತಿ ಮೂರನೇ ತಲೆಮಾರಿನ ಕಾಂಗ್ರೆಸ್ ನಾಯಕರಿಗೆ ಇನ್ನೂ ಹೋಗಿಲ್ಲ’ ಎಂದು ಬರೆದುಕೊಂಡಿದ್ದಾರೆ.
‘ಕೆ.ಎನ್ . ರಾಜಣ್ಣ ಒಬ್ಬ ಹಿರಿಯ ಅನುಭವಿ ರಾಜಕಾರಣಿ. ತಮ್ಮ ಇಲಾಖೆಯಲ್ಲಿ ದಕ್ಷತೆಯಿಂದ ಕೆಲಸ ಮಾಡಿದ್ದರು. ಎಸ್ಟಿ ಸಮುದಾಯದ ಹಿರಿಯ ನಾಯಕ ಅವರಿಗೆ ರಾಜಿನಾಮೆ ಕೊಡಲು ಅವಕಾಶ ಕೊಡದಿರುವುದು ಅವರ ಅನುಭವ, ದಕ್ಷತೆ, ಎಸ್‌ಟಿ ಜನಾಂಗಕ್ಕೆ ಮಾಡಿರುವ ಅವಮಾನ’ ಎಂದು ಹೇಳಿದ್ದಾರೆ.
ಮತ ಸೇರ್ಪಡೆ ಕಾಂಗ್ರೆಸ್ ಆಡಳಿತದಲ್ಲಿ ಆಗಿದೆ ಎನ್ನುವುದು ಕಟು ಸತ್ಯ. ಅದನ್ನು ಅಳಿಸಲು ಸಾಧ್ಯವಿಲ್ಲ. ಸತ್ಯದ ಕನ್ನಡಿಯಂತೆ ರಾಹುಲ್ ಗಾಂಧಿ ಹೇಳಿರುದುವುದಕ್ಕೆ ಮೆಚ್ಚಬೇಕು. ಆದರೆ ಪ್ರಮಾಣಿಕರಿಗೆ ಕಾಂಗ್ರೆಸ್ ನಲ್ಲಿ ಸ್ಥಳ ಇಲ್ಲ ಎನ್ನುವುದು ಸ್ಪಷ್ಟವಾಗಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.