ADVERTISEMENT

ಸಾರಿಗೆ ನೌಕರರ ವಿರುದ್ಧ ಎಸ್ಮಾ ಜಾರಿ ಇಲ್ಲ: ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2020, 11:18 IST
Last Updated 12 ಡಿಸೆಂಬರ್ 2020, 11:18 IST
 ಗೃಹ ಸಚಿವ ಬಸವರಾಜ ಬೊಮ್ಮಾಯಿ
ಗೃಹ ಸಚಿವ ಬಸವರಾಜ ಬೊಮ್ಮಾಯಿ    

ಬೆಂಗಳೂರು: ‘ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಆಗ್ರಹಿಸಿ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರ ವಿರುದ್ಧ ಎಸ್ಮಾ (ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ) ಜಾರಿಯ ಪರಿಸ್ಥಿತಿ ಇನ್ನೂ ಬಂದಿಲ್ಲ. ಸದ್ಯಕ್ಕೆ ಎಸ್ಮಾ ಜಾರಿ ಇಲ್ಲ. ಸಾರಿಗೆ ನೌಕರರಿಗೂ ಜನರ ಕಷ್ಟ ಗೊತ್ತಾಗಿದೆ. ಒಂದೆರಡು ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂಬ ವಿಶ್ವಾಸ ಇದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮೊದಲು ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಲಿ. ಆ ಬಳಿಕ ಮಾತುಕತೆಗೆ ನಾವು ಸಿದ್ಧರಿದ್ಸೇವೆ’ ಎಂದರು.

‘ಸಾರಿಗೆ ನೌಕರರ ಮುಷ್ಕರ ಕಾರಣ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ. ಬೆಳಿಗ್ಗೆಯಿಂದ ನಿರಂತರವಾಗಿ ಸಮಸ್ಯೆ ಬಗೆಹರಿಸಲು ಯತ್ನ ನಡೆಯುತ್ತಿದೆ. ಮುಖ್ಯಮಂತ್ರಿ ಕೂಡಾ ಕೂಡ ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಸಾರಿಗೆ ಸಚಿವರು ನಿರ್ಲಕ್ಷ್ಯ ತೋರಿಲ್ಲ. ಬಹುತೇಕ ನೌಕರರು ಕರ್ತವ್ಯಕ್ಕೆ ಗೈರಾಗಿದ್ದಾರೆ. ಸಾರ್ವಜನಿಕರ ದೃಷ್ಟಿಯಿಂದ ಎಲ್ಲ ರೀತಿಯ ರಕ್ಷಣೆ ಕೊಡುತ್ತಿದ್ದೇವೆ. ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ನಷ್ಟದ ಸಂದರ್ಭದಲ್ಲೂ ಸಾರಿಗೆ ನೌಕರರಿಗೆ ವೇತನ ನೀಡುವ ಮೂಲಕ ಅವರ ಜೊತೆ ಸರ್ಕಾರ ನಿಂತಿದೆ’ ಎಂದರು.

ADVERTISEMENT

‘ಕೋವಿಡ್ ಸಂದರ್ಭದಲ್ಲಿ ಬೇಡಿಕೆ ಈಡೇರಿಸುವುದು ಕಷ್ಟ. ಮೊದಲು ಮುಷ್ಕರ ಕೈಬಿಟ್ಟು ಮಾತುಕತೆಗೆ ಬನ್ನಿ’ ಎಂದೂ ಮುಷ್ಕರ ನಿರತರನ್ನು ಬೊಮ್ಮಾಯಿ ಆಹ್ವಾನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.