ADVERTISEMENT

ಡ್ರಗ್‌ ಮಾಫಿಯಾ: ಕಾನೂನು ಇನ್ನಷ್ಟು ಬಿಗಿಗೊಳಿಸಲು ನಿರ್ಧಾರ -ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2020, 6:27 IST
Last Updated 10 ಸೆಪ್ಟೆಂಬರ್ 2020, 6:27 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ‘ರಾಜ್ಯದಲ್ಲಿ ಡ್ರಗ್ಸ್‌ ನಿಯಂತ್ರಣ ದೃಷ್ಟಿಯಿಂದ ಕಾನೂನು ಇನ್ನಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಗುರುವಾರ ಮಾತನಾಡಿದ ಅವರು, ‘ಈಕುರಿತು ಕಾನೂನು ತಜ್ಞರ ಜೊತೆ ಮತ್ತು ರಾಷ್ಟ್ರೀಯ ಕಾನೂನು ಶಾಲೆಯ ಮುಖ್ಯಸ್ಥರ ಜೊತೆ ಈಗಾಗಲೇ ಮಾತನಾಡಿದ್ದೇನೆ. ಕಾನೂನು ಸಚಿವರ ಜೊತೆಗೂ ಚರ್ಚೆ ಮಾಡುತ್ತೇನೆ’ ಎಂದರು.

‘ಡಗ್ಸ್ ಜಾಲ ಪತ್ತೆ ಹಚ್ಚುವ ನಿಟ್ಟಿನಲ್ಲಿ ಕೇಂದ್ರ ಅಪರಾಧ ದಳ (ಸಿಸಿಬಿ) ಅಧಿಕಾರಿಗಳು ಬಹಳ ವೃತ್ತಿಪರವಾಗಿ, ಕ್ರಮಬದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ತನಿಖೆಯ ಜಾಡು ಹಿಡಿದು, ಎಷ್ಟೆ ದೊಡ್ಡವರಿರಲಿ ವಿಚಾರಣೆ ಮಾಡುವುದು ಶತಸಿದ್ಧ’ ಎಂದೂ ಅವರು ಹೇಳಿದರು.‌

ADVERTISEMENT

‘ನಮ್ಮ ಕಾರ್ಯಾಚರಣೆ, ವಿಚಾರಣೆ, ನ್ಯಾಯಾಲಯದ ಪರಿಶೀಲನೆಯಡಿ ಕಾನೂನಿನ ಅನ್ವಯ ನಡೆಯುತ್ತಿದೆ. ವ್ಯವಸ್ಥಿತವಾಗಿ ಸಾಕ್ಷ್ಯಗಳ ಆಧಾರಗಳ ಮೇಲೆ ತನಿಖೆ ನಡೆಯುತ್ತಿದೆ’ ಎಂದೂ ಅವರು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.