ಬೆಂಗಳೂರು: ‘ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ ಅನಗತ್ಯವಾಗಿ ಓಡಾಡುವವರ ವಿರುದ್ಧ ಕೇಸ್ ದಾಖಲಿಸಲು ಸೂಚನೆ ನೀಡಿದ್ದೇನೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ಬೆಂಗಳೂರು ಸೇರಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಡೆದಿರುವ ಲಾಕ್‌ಡೌನ್ ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜತೆ ಪರಾಮರ್ಶೆ ನಡೆಸಿದ್ದೇನೆ’ ಎಂದು ತಿಳಿಸಿದರು.
‘ಲಾಕ್‌ಡೌನ್ ನಿಯಂತ್ರಣದಲ್ಲಿ ಇದೆ. ಕೆಲವರು ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. ನಗರದಲ್ಲಿ ಈಗ ಇರುವ ಆಂಬುಲೆನ್ಸ್‌ಗಳಿಗೆ ಹೆಚ್ಚುವರಿಯಾಗಿ 200 ಆಂಬುಲೆನ್ಸ್‌ಗಳನ್ನು ಹಂತ– ಹಂತವಾಗಿ ನೀಡಲಾಗುವುದು’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.